ಮಂಗಳೂರು: ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಮತ್ತು ಪೌರರಕ್ಷಣಾ ಪಡೆ ಚೀಫ್ ವಾರ್ಡನ್ ಡಾ|| ಮುರಲೀ ಮೋಹನ್ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ಏ.5 ರ ಬುಧವಾರ ಬೆಳಿಗ್ಗೆ 11.00 ಗಂಟೆಗೆ ಜಿಲ್ಲಾ ಗೃಹರಕ್ಷಕ ದಳ ಕಛೇರಿ, ಮೇರಿಹಿಲ್, ಮಂಗಳೂರು ಇಲ್ಲಿ ಜಿಲ್ಲೆಯ ಎಲ್ಲಾ 15 ಘಟಕಗಳ ಘಟಕಾಧಿಕಾರಿಗಳ ಸಭೆ ನಡೆಯಲಿದೆ.
ಮುಂಬರುವ ವಿಧಾನಸಭಾ ಚುನಾವಣೆಗೆ ಗೃಹರಕ್ಷಕರನ್ನು ನಿಯೋಜಿಸುವ ಕುರಿತು ಹಾಗೂ ಇತರೆ ವಿಷಯಗಳ ಬಗ್ಗೆ ಚರ್ಚೆ ನಡೆಸಲು ಈ ಸಭೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಮತ್ತು ಪೌರರಕ್ಷಣಾ ಪಡೆ ಚೀಫ್‍ವಾರ್ಡನ್ ಡಾ|| ಚೂಂತಾರು ತಿಳಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ