ಉಡುಪಿ: ಸ್ವೀಪ್ ಸಮಿತಿ ವತಿಯಿಂದ ಪ್ರೊಫೈಲ್ ಇಮೇಜ್ ಬಿಡುಗಡೆ

Upayuktha
0

ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ, ಉಡುಪಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಜಾಗೃತಿಗೆ ಹಲವು ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಯುವಜನತೆ ಸೇರಿದಂತೆ  ಬಹುತೇಕ ಮಂದಿ ಹೆಚ್ಚಿನ ಸಂಖ್ಯೆಯಲ್ಲಿ ಸಾಮಾಜಿಕ ಮಾಧ್ಯಮಗಳನ್ನು ಬಳಸುತ್ತಿರುವ ಹಿನ್ನಲೆಯಲ್ಲಿ  ಇವರನ್ನು ದೃಷ್ಟಿಯಲ್ಲಿಟ್ಟುಕೊಂಡು ಪ್ರೊಫೈಲ್ ಇಮೇಜ್‍ಗಳನ್ನು ಸಿದ್ದಪಡಿಸಲಾಗಿದೆ.

 

ಮತದಾನದ  ಕುರಿತು ಜಾಗೃತಿ ಮೂಡಿಸಲು ಮತದಾನದ ದಿನವಾದ ಮೇ 10 ನ್ನು ಸಾರ್ವಜನಿಕರಿಗೆ ಸದಾ ನೆನಪು ಮಾಡುವಂತೆ, ಪ್ರೊಫೈಲ್ ಇಮೇಜ್ ಗಳನ್ನು ಸಿದ್ದಪಡಿಸಿದ್ದು, ಇವುಗಳನ್ನು ಮೊಬೈಲ್ ನ ಡಿಪಿಯಾಗಿ ಹಾಗೂ ಫೇಸ್ ಬುಕ್ ನಲ್ಲಿ ಸ್ಟಿಕರ್ ಆಗಿ ಬಳಸಲು ಅನುಕೂಲವಾಗುವಂತೆ  ರಚಿಸಲಾಗಿದೆ.

 

ಜಿಲ್ಲೆಯ ಪ್ರಮುಖ ಪ್ರವಾಸಿತಾಣಗಳಾದ ಸೈಂಟ್ ಮೇರಿಸ್ ದ್ವೀಪ, ಸಮುದ್ರ ತೀರ, ಕಾಪು ದೀಪ ಸ್ಥಂಭ, ಮರವಂತೆ , ಪಶ್ಚಿಮ ಘಟ್ಟಗಳನ್ನು  ಹಿನ್ನಲೆಯಾಗಿ ಇಟ್ಟುಕೊಂಡು  8ಕ್ಕೂ ಅಧಿಕ ಪ್ರೊಫೈಲ್ ಇಮೇಜ್ ಗಳನ್ನು ಅತ್ಯಂತ ಆಕರ್ಷಕವಾಗಿ ಸಿದ್ದಪಡಿಸಲಾಗಿದ್ದು,  ಇಂದು  ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಇವುಗಳನ್ನು ಬಿಡುಗಡೆಗೊಳಿಸಿದರು. 


ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಜಿಲ್ಲಾ ಚುನಾವಣಾ ಶಾಖೆಯ ತಹಸೀಲ್ದಾರ್ ಪರಶುರಾಮ್ ಕಲಾಲ್ ಮತ್ತಿತರರು ಉಪಸ್ಥಿತರಿದ್ದರು.


ಈ ಪ್ರೊಫೈಲ್ ಇಮೇಜ್‍ಗಳನ್ನು ಕಮಲ್ ಅಹಮದ್ ರಚಿಸಿದ್ದು, ಗಿರೀಶ್ ಹಾಗೂ ಚಂದ್ರಶೇಖರ್ ವಿನ್ಯಾಸಗೊಳಿಸಿದ್ದಾರೆ.

 

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top