ಎಸ್ ಡಿಎಂ ಕಾಲೇಜು ಉಜಿರೆ: ವಿದ್ಯಾರ್ಥಿಗಳ ನೇರ ಸಂದರ್ಶನ ನೇಮಕಾತಿ ಪ್ರಕ್ರಿಯೆ

Upayuktha
0


ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯಲ್ಲಿ ಎಸ್ ಡಿ ಎಂ ರೋಟರಿ ವೃತ್ತಿ ಮಾರ್ಗ ದರ್ಶನ ಮತ್ತು ಮಾನವ ಸಂಪನ್ಮೂಲ ಕೇಂದ್ರವು ಆಯೋಜಿಸಿದ್ದ ನೇರ ಸಂದರ್ಶನ ಮತ್ತು ನೇಮಕಾತಿ ಪ್ರಕ್ರಿಯೆಯಲ್ಲಿ ಎಂಫಸಿಸ್ (Mphasis) ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ವರಿಷ್ಠರಾದ ಶ್ರೀಮತಿ ಶಾಂಭವಿ ಕೆ ನೇರ ಸಂದರ್ಶನ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. 


ಸಂದರ್ಶನದಲ್ಲಿ 174 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಆಯ್ಕೆ ಪ್ರಕ್ರಿಯೆಯ ವಿವಿಧ ಹಂತಗಳಾದ ನೇಮಕಾತಿ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದಲ್ಲಿ  ಉತ್ತೀರ್ಣರಾದ 28 ವಿದ್ಯಾರ್ಥಿಗಳು  ಆಯ್ಕೆ ಆಗಿರುತ್ತಾರೆ. ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ಯವರ ಮಾರ್ಗದರ್ಶನದಲ್ಲಿ ಡಾ. ನಾಗರಾಜ ಪೂಜಾರಿ ಮತ್ತು ಹರೀಶ ಶೆಟ್ಟಿ ಅವರ ತಂಡವು ಯಶಸ್ವಿಯಾಗಿ ನೇಮಕಾತಿ ಪ್ರಕ್ರಿಯೆಯನ್ನು ಸಂಘಟಿಸಿ ನಿರ್ವಹಣೆ ಮಾಡಿದರು.


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯ ಅಂತಿಮ ಸೆಮಿಸ್ಟರ್ ನ ವಿದ್ಯಾರ್ಥಿಗಳು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ Infosys, SAP Software, Mphasis, Kotak Life, Prop Times  Societe Generale ಮತ್ತು ICICI Bankಗಳಿಗೆ ಒಟ್ಟು 288 ವಿದ್ಯಾರ್ಥಿಗಳು ಆಯ್ಕೆ ಆಗಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top