ಇಂಪ್ರಿಂಟ್ಸ್ ಅಂತರ್ ಕಾಲೇಜು ವಿಜ್ಞಾನ ಸ್ಪರ್ಧೆಯಲ್ಲಿ ಎಸ್ ಡಿಎಂ ವಿದ್ಯಾರ್ಥಿಗಳಿಗೆ ಬಹುಮಾನ

Upayuktha
0



ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿದ್ಯಾರ್ಥಿಗಳು ಮಂಗಳೂರಿನ ಸಂತ  ಅಲೋಶಿಯಸ್ ಕಾಲೇಜಿನಲ್ಲಿ ಆಯೋಜಿಸಿದ್ದ ವಿಜ್ಞಾನ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆದುಕೊಂಡಿದ್ದಾರೆ.


ಶುಕ್ರವಾರದಂದು ಸಂತ ಅಲೋಶಿಯಸ್ ಕಾಲೇಜಿನ ವಾರ್ಷಿಕ ಉತ್ಸವದ ಅಂಗವಾಗಿ ಇಂಪ್ರಿಂಟ್ಸ್ ಎಂಬ ಅಂತರ್ ಕಾಲೇಜು ವಿಜ್ಞಾನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಭೌತಶಾಸ್ತ್ರ, ರಸಾಯನಶಾಸ್ತ್ರ, ಸಸ್ಯಶಾಸ್ತ್ರ, ಜೀವಶಾಸ್ತ್ರ, ಜೈವಿಕ ತಂತ್ರಜ್ಞಾನ ವಿಭಾಗಗಳಿಂದ ವಿವಿಧ ಹಂತಗಳ ಸ್ಪರ್ಧೆಗಳನ್ನು ನಡೆಸಲಾಯಿತು. ತೃತೀಯ ಬಿ.ಎಸ್ಸಿ ವಿದ್ಯಾರ್ಥಿಗಳಾದ ವಿವೇಕ್, ಪ್ರಸಾದ್, ಶ್ರೀಷಾ ಹೆಗ್ಡೆ ಭೌತಶಾಸ್ತ್ರ ಸ್ಪರ್ಧೆಯಲ್ಲಿ ಹಾಗೂ ಖುಷಿ, ರಕ್ಷಿತ್ ರಸಾಯನಶಾಸ್ತ್ರ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದರು. ವಿಜೇತರನ್ನು ಕಾಲೇಜು ಮಂಡಳಿ ಅಭಿನಂದಿಸಿದೆ. ಕಾಲೇಜಿನ ಗಣಿತ ವಿಭಾಗದ ಅಧ್ಯಾಪಕರಾದ ಪೂಜಿತಾ ವರ್ಮಾ ಜೈನ್ ರವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top