ಉಜಿರೆ ಎಸ್‌ಡಿಎಂ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಭೆ

Upayuktha
0

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ವಿಶೇಷ ಸಭೆ ದಿನಾಂಕ ಏಪ್ರಿಲ್ 22 ರಂದು ಕಾಲೇಜಿನ ಸಭಾಂಗಣದಲ್ಲಿ ಜರಗಿತು.


ಹಿರಿಯ ವಿದ್ಯಾರ್ಥಿಗಳ ಸಂಘದ ಕಾರ್ಯ ಚಟುವಟಿಕೆಗಳನ್ನು ಪರಾಮರ್ಶಿಸಿದ ಬಳಿಕ ಮೇ ಒಂದನೇ ತಾರೀಖಿನಂದು ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ  ಸಮ್ಮಿಲನ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಆಯೋಜಿಸಲು ತೀರ್ಮಾನಿಸಲಾಯಿತು.


ಗರಿಷ್ಠ ಸಂಖ್ಯೆಯಲ್ಲಿ ಹಿರಿಯ ವಿದ್ಯಾರ್ಥಿಗಳನ್ನು ಆಹ್ವಾನಿಸಿ ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನೆರವೇರಿಸಲು ಅಭಿಪ್ರಾಯ ವ್ಯಕ್ತವಾಯಿತು.


ಇದೇ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾಗಿ ಜವಾಬ್ದಾರಿ ಸ್ವೀಕರಿಸಿರುವ ಡಾ. ಬಿ.ಎ ಕುಮಾರ ಹೆಗ್ಡೆ ಅವರನ್ನು ಅಭಿನಂದಿಸಿ ಗೌರವಿಸಲಾಯಿತು.


ಹಿರಿಯ ವಿದ್ಯಾರ್ಥಿಗಳ ಉಜಿರೆ ಘಟಕದ ಅಧ್ಯಕ್ಷ ಪ್ರೀತಾಂಬರ ಹೆರಾಜೆ, ಕಾರ್ಯದರ್ಶಿ ಧನಂಜಯ ರಾವ್ ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಡಾ. ಎಂ.ಪಿ ಶ್ರೀನಾಥ್ ಮತ್ತು ಶೈಲೇಶ್ ಕಾರ್ಯಕ್ರಮವನ್ನು ಸಂಯೋಜಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top