ಶಿವಮೊಗ್ಗ: ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎಸ್ ಎನ್ ಚನ್ನಬಸಪ್ಪನವರು ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪನವರು, ಗೃಹ ಸಚಿವರಾದ ಅರಗ ಜ್ಞಾನೇಂದ್ರರವರು ಜಿಲ್ಲಾ ಅಧ್ಯಕ್ಷರಾದ ಟಿ. ಡಿ ಮೇಘರಾಜ್ ಅವರೊಂದಿಗೆ ಇಂದು (ಏ.20, ಗುರುವಾರ) ಕೋಟೆ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಹಸ್ರಾರು ಸಂಖ್ಯೆಯ ಕಾರ್ಯಕರ್ತ ಜೊತೆ ಮೆರವಣಿಗೆ ಮೂಲಕ ಬೃಹತ್ ಸಭೆಯಲ್ಲಿ ಭಾಗವಹಿಸಿದರು.
ಸಭೆಯನ್ನು ಉದ್ದೇಶಿಸಿ ಬಿಜೆಪಿ ಅಭ್ಯರ್ಥಿ ಎಸ್ ಎನ್ ಚನ್ನಬಸಪ್ಪನವರು, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾದ ಟಿ ಡಿ ಮೇಘರಾಜ್ ರವರು, ವಿಧಾನಪರಿಷತ್ ಸದಸ್ಯರಾದ ಅರುಣ್ ಡಿ ಎಸ್, ನಗರ ಬಿಜೆಪಿ ಅಧ್ಯಕ್ಷರಾದ ಎನ್ ಕೆ ಜಗದೀಶ್, ಮಾತನಾಡಿದರು. ಈ ಸಂದರ್ಭದಲ್ಲಿ ಉತ್ತರಕಾಂಡ್ ವೀಕ್ಷಕರು, ನಗರ ಉಸ್ತುವಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿಲ್ಲಾ ಪ್ರಮುಖರಾದ ಡಾ. ಧನಂಜಯ್ ಸರ್ಜಿ, ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್ ಉಪ ಮೇಯರ್ ಲಕ್ಷ್ಮಿ ಶಂಕರ್ ನಾಯ್ಕ್ ಪ್ರಮುಖರಾದ ಎನ್ ಜೆ ರಾಜಶೇಖರ್, ನಗರ ಪ್ರದಾನ ಕಾರ್ಯದರ್ಶಿಗಳಾದ ಬಳ್ಳೇಕೆರೆ ಸಂತೋಷ್, ಮೋಹನ್ ರೆಡ್ಡಿ, ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕರಾದ ಜ್ಞಾನೇಶ್ವರ್, ಸೂಡಾ ಅಧ್ಯಕ್ಷರಾದ ಎನ್ ಜಿ ನಾಗರಾಜ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಹರಿ ಕೃಷ್ಣ ಎಂ ಬಿ ಮಹಾನಗರ ಪಾಲಿಕೆ ಸದಸ್ಯರುಗಳು, ಜಿಲ್ಲಾ ಪ್ರಮುಖರು, ಪದಾಧಿಕಾರಿಗಳು,ನಗರ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ