ಜಿಲ್ಲಾ ಬಾಲಭವನದಲ್ಲಿ ಬೇಸಿಗೆ ಶಿಬಿರ : ಅರ್ಜಿ ಅಹ್ವಾನ

Upayuktha
0

 


ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬೇಸಿಗೆ ಶಿಬಿರವು ನಗರದ ಬ್ರಹ್ಮಗಿರಿ ಜಿಲ್ಲಾ ಬಾಲಭವನದಲ್ಲಿ ಏಪ್ರಿಲ್ 30 ರಿಂದ 15 ದಿನಗಳ ಕಾಲ ನಡೆಯಲಿದ್ದು, ಅರ್ಹ ಆಸಕ್ತ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

 

ಬೆಳಗ್ಗೆ 10 ರಿಂದ ಮಧ್ಯಾಹ್ನ 3.30 ರ ವರೆಗೆ ಶಿಬಿರವು ನಡೆಯಲಿದ್ದು, ಶಿಬಿರದಲ್ಲಿ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಾದ ಚಿತ್ರಕಲೆ, ವಾಲ್ ಆರ್ಟ್, ಕರಕುಶಲ ಕಲೆ, ಪಿ.ಒ.ಪಿ ಹೂದಾನಿ, ಸಮೂಹ ನೃತ್ಯ, ಸಂಗೀತ, ಕರಾಟೆ, ಭಾಷಣ, ಕೌಶಲ್ಯ ತರಬೇತಿ ಹಾಗೂ ಮುಂತಾದ ವಿಷಯಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಉಚಿತ ತರಬೇತಿ ನೀಡಲಾಗುವುದು.  

 

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಯೋಜಕರು, ಜಿಲ್ಲಾ ಬಾಲಭವನ, ಬ್ರಹ್ಮಗಿರಿ, ಉಡುಪಿ ಮೊ.ನಂ: 8296249087, 7619200153 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top