ಗೋವಿಂದ ದಾಸ ಕಾಲೇಜು: 'ಭಾರತದ ಸ್ವಾತಂತ್ರ್ಯ ಸಂಗ್ರಾಮ' ವಿಶೇಷ ಉಪನ್ಯಾಸ

Upayuktha
0


ಸುರತ್ಕಲ್: ಯುವಜನತೆ ಭಾರತದ ಸ್ವಾತಂತ್ರ ಸಂಗ್ರಾಮದಲ್ಲಿ ಹೋರಾಡಿದ ಹಿರಿಯರನ್ನು ಗೌರವಿಸಬೇಕು ಹಾಗೂ ಸದಾ ನೆನಪಿಟ್ಟುಕೊಳ್ಳಬೇಕು ಎಂದು ದೆಹಲಿ ಐ.ಐ.ಟಿಯ ಭೌತಶಾಸ್ತ್ರ ವಿಭಾಗದ ಗೌರವ ಪ್ರಾಧ್ಯಾಪಕ ಪ್ರೊ. ವಿಪಿನ್ ಕುಮಾರ್ ತ್ರಿಪಾಠಿ ನುಡಿದರು.


ಅವರು ಗೋವಿಂದ ದಾಸ ಕಾಲೇಜಿನ ಮಾನವಿಕ ಸಂಘ ಮತ್ತು ರಾಜ್ಯಶಾಸ್ತ್ರ ವಿಭಾಗ ಜಂಟಿಯಾಗಿ ಆಯೋಜಿಸಿದ್ದ  “ಭಾರತದ ಸ್ವಾತಂತ್ರ್ಯ ಸಂಗ್ರಾಮ” ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು.


ಮಂಗಳೂರು ವಿಶ್ವವಿದ್ಯಾನಿಲಂಯದ ನೆಹರು ಅಧ್ಯಯನ ಕೇಂದ್ರದ ನಿರ್ದೇಶಕರಾದ ಪ್ರೊ. ರಾಜರಾಮ್ ತೋಳ್ಪಾಡಿ ಮುಖ್ಯ ಅತಿಥಿಗಳಾಗಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ  ಪ್ರೊ. ಕೃಷ್ಣಮೂರ್ತಿ ಪಿ., ವಹಿಸಿದ್ದರು. ಆಂತರಿಕ ಗುಣಮಟ್ಟ  ಖಾತರಿ  ಕೋಶದ ಸಂಯೋಜಕರಾದ ಪ್ರೊ. ಪಿ. ಹರೀಶ ಆಚಾರ್ಯ, ಉಪನ್ಯಾಸಕಿಯರಾದ ದಯಾ ಸುವರ್ಣ, ಡಾ. ವಿಜಯಲಕ್ಷ್ಮಿ, ರಶ್ಮಿ ಕಾಯರ್‍ಮಾರ್ ಉಪಸ್ಥಿತರಿದ್ದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಸುಧಾ ಯು. ಕಾರ್ಯಕ್ರಮ ಸಂಯೋಜಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter



Post a Comment

0 Comments
Post a Comment (0)
Advt Slider:
To Top