ಮಂಗಳೂರು: ದಿನಾಂಕ 23-04-2023ನೇ ಭಾನುವಾರದಂದು ಮಂಗಳೂರು ಹಾಗೂ ಉಳ್ಳಾಲ ಘಟಕದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿ ಆವರಣದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ. ಮುರಲಿ ಮೋಹನ್ ಚೂಂತಾರು ಅವರು ಮಾತನಾಡಿ ಪರಿಸರದ ಸ್ವಚ್ಚತೆ ಮತ್ತು ನೈರ್ಮಲ್ಯ ಕಾಪಾಡಿಕೊಳ್ಳುವುದು ಪ್ರತಿಯೊಬ್ಬ ನಾಗರೀಕರ ಆದ್ಯ ಕರ್ತವ್ಯವಾಗಿರುತ್ತದೆ. ಸ್ವಚ್ಚ ಪರಿಸರ, ಸ್ವಚ್ಚ ನೀರು, ಸ್ವಚ್ಚ ಗಾಳಿಯಿಂದ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ದಿಸುತ್ತದೆ. ಈ ನಿಟ್ಟಿನಲ್ಲಿ ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಿ, ಫಲವತ್ತಾದ ಭೂಮಿಯನ್ನು ಕಾಪಾಡಿಕೊಂಡು ಪರಿಸರ ರಕ್ಷಿಸಿಕೊಂಡಲ್ಲಿ ಆರೋಗ್ಯಪೂರ್ಣ ಸಮೃದ್ಧ ಸಮಾಜದ ನಿರ್ಮಾಣ ಸಾಧ್ಯವಿದೆ ಎಂದು ನುಡಿದರು.
ಈ ಅಭಿಯಾನದಲ್ಲಿ ಮಂಗಳೂರು ಘಟಕದ ಸಾರ್ಜೆಂಟ್ ಸುನಿಲ್ ಕುಮಾರ್, ಜ್ಞಾನೇಶ್, ಸಂದೇಶ್, ದಿವಾಕರ್, ಜಯಂತಿ ಉಳ್ಳಾಲ ಘಟಕದ ಗೃಹರಕ್ಷಕರಾದ ಸುನಿಲ್, ದಿವ್ಯಾ, ಯಶವಂತಿ, ಲತೇಶ್ ಮುಂತಾದವರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ