ತೆಂಕನಿಡಿಯೂರು: ಮಾನಸಿಕ ನೈರ್ಮಲ್ಯದ ಪ್ರಾಮುಖ್ಯತೆಗಳು- ಉಪನ್ಯಾಸ

Upayuktha
0



ತೆಂಕನಿಡಿಯೂರು: ಸಕಾರಾತ್ಮಕ ವೈದ್ಯಕೀಯ ಪದ್ಧತಿಯಾದ ಮಾನಸಿಕ ನೈರ್ಮಲ್ಯ ಕಾಪಾಡಿಕೊಳ್ಳಲು ವಿದ್ಯಾರ್ಥಿನಿಯರು ಇಂದು ತಮ್ಮನ್ನು ತೊಡಗಿಸಿಕೊಳ್ಳುವ ಅವಶ್ಯಕತೆ ಇದೆ. ಏಕಾಂತದಲ್ಲಿ ಸಮಸ್ಯೆಗಳನ್ನು ಎದುರಿಸದೆ, ಪ್ರಸ್ತುತ ಲಭ್ಯವಿರುವ ಸನ್ಮಾರ್ಗದಲ್ಲಿ ಸೂಕ್ತ ನಿರ್ದೇಶನದಲ್ಲಿ ಪರಿಹಾರವನ್ನು ಕಂಡುಕೊಂಡಲ್ಲಿ ವಿದ್ಯಾರ್ಥಿ ಜೀವನ ಯಶಸ್ವಿ ಕಾಣಲು ಸಾಧ್ಯ ಎಂದು ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್‍ನ ಮೆಂಟಲ್ ಹೆಲ್ತ್ ನರ್ಸಿಂಗ್ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಪ್ಲಾವಿಯ ಶಾರ್ಲೆಟ್ ನೊರೋಹ್ಹ ಅಭಿಪ್ರಾಯಪಟ್ಟರು.

 

ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರಿನ ವಾಣಿಜ್ಯಶಾಸ್ತ್ರ ಮತ್ತು ನಿರ್ವಹಣಾಶಾಸ್ತ್ರ ವಿಭಾಗದ ವಿದ್ಯಾರ್ಥಿನಿಯರಿಗಾಗಿ ಆಯೋಜಿಸಿದ್ದ, ಮಾನಸಿಕ ನೈರ್ಮಲ್ಯ ಮತ್ತು ಪ್ರಾಮುಖ್ಯತೆಗಳು ವಿಷಯದ ಕುರಿತು ಉಪನ್ಯಾಸ ನೀಡಿದರು.  


ಪ್ರಾಂಶುಪಾಲರಾದ ಪ್ರೊಫೆಸರ್ ಸುರೇಶ್ ರೈ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಬಿಂದು ಟಿ., ನಿರ್ವಹಣಾಶಾಸ್ತ್ರ ಮುಖ್ಯಸ್ಥರಾದ ಡಾ. ರಘು ನಾಯ್ಕ, ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ಪ್ಲೇಸ್ಮೆಂಟ್ ಸೆಲ್ ಸಂಚಾಲಕರಾದ ಶ್ರೀ ಉಮೇಶ್ ಪೈ, ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥರಾದ ಶ್ರೀ ಶ್ರೀನಿವಾಸ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಅಂತಿಮ ಬಿ.ಕಾಂ. ವಿದ್ಯಾರ್ಥಿನಿ ಕಾವ್ಯ ಸ್ವಾಗಸಿದರು.  ಅರ್ಚನಾ ಧನ್ಯವಾದಗೈದರು. ವಿದ್ಯಾರ್ಥಿನಿ ಚೈತ್ರ ಕಾರ್ಯಕ್ರಮ ನಿರೂಪಿಸಿದರು.


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top