ಉಡುಪಿ : ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಉದ್ಯೋಗ ಮಾಹಿತಿ ಘಟಕ, ಐಕ್ಯೂಎಸಿ ಘಟಕ ಹಾಗೂ ಪ್ರಗತಿ ಪೋಷಕ್ ಇವುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ: 26/04/2023 ರಂದು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶ್ರೀ ದೇವೇಂದ್ರ ಎನ್.ಎಂ. ಪಿ.ಆರ್.ಒ. ಪ್ರಗತಿ ಪೋಷಕ್ ಹುಬ್ಬಳ್ಳಿ, ಇನ್‍ಫೋಸಿಸ್ ಫೌಂಡೇಶನ್ ಅವರು ಪದವಿಯ ನಂತರದ ಉದ್ಯೋಗಾವಕಾಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಉದ್ಯೋಗಕ್ಕೆ ಅತ್ಯಗತ್ಯವಾದ ವಿವಿಧ ಕೌಶಲ್ಯಗಳ ತರಬೇತಿಗಳ ಬಗ್ಗೆ ಮಾಹಿತಿಯನ್ನು ತಿಳಿಸುತ್ತಾ ಅವುಗಳನ್ನು ಪಡೆದುಕೊಂಡು ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕೆಂದರು.
ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಸುರೇಶ್ ರೈ ಕೆ. ಅವರು ಇನ್‍ಫೋಸಿಸ್ ನಂತಹ ಬಹುರಾಷ್ಟ್ರೀಯ ಕಂಪನಿಗಳು ಸಾಮಾಜಿಕ ಕೊಡುಗೆಯ ಭಾಗವಾಗಿ ಇಂತಹ ತರಬೇತಿಗಳನ್ನು ನಿರಂತವಾಗಿ ನಡೆಸುತ್ತಿದ್ದು, ವಿದ್ಯಾರ್ಥಿಗಳು ಅದರ ಉಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.
ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ ಉಪಸ್ಥಿತರಿದ್ದರು. ಉದ್ಯೋಗ ಮಾಹಿತಿ ಘಟಕದ ಸಂಚಾಲಕರಾದ ಡಾ. ಎಚ್.ಕೆ. ವೆಂಕಟೇಶ ಸ್ವಾಗತಿಸಿದರೆ, ಶ್ರೀ ಉಮೇಶ್ ಪೈ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ