ವಿವಿ ಕಾಲೇಜು: ವೃತ್ತಿ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅಭಿಮತ
ಮಂಗಳೂರು: ಪದವಿ ವ್ಯಾಸಂಗದೊಂದಿಗೆ ಸಾಮಾನ್ಯ ಜ್ಞಾನವನ್ನೂ ಬೆಳೆಸಿಕೊಳ್ಳಬೇಕು. ಸಾಮಾನ್ಯ ಜ್ಞಾನವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮುಖ್ಯವಾಗಿದ್ದು ಓದುವಾಗ ಧ್ಯೇಯ, ಸಂಕಲ್ಪ, ಗುರಿಯನ್ನು ನಿರ್ಧರಿಸಬೇಕು. ಸಮಯೋಚಿತವಾಗಿ ಕ್ರಿಯಾಯೋಜನೆ ಮಾಡಿಕೊಂಡಾಗ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಾಧ್ಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಮತ್ತು ವಿಶ್ವವಿದ್ಯಾನಿಲಯ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರದ ಉಪಮುಖ್ಯಸ್ಥ ಎಸ್.ಜೆ. ಹೇಮಚಂದ್ರ ಅಭಿಪ್ರಾಯಪಟ್ಟರು.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಬುಧವಾರ, ಮಂಗಳೂರು ವಿಶ್ವವಿದ್ಯಾನಿಲಯ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರದ ಸಹಯೋಗದಲ್ಲಿ ಆಯೋಜಿಸಲಾಗದ್ದ ವೃತ್ತಿ ಮಾರ್ಗದರ್ಶನ ಕಾರ್ಯಾಗಾರದ ಮೊದಲ ಅವಧಿಯಲ್ಲಿ "ಸ್ಪರ್ಧಾತ್ಮಕ ಪರೀಕ್ಷೆ, ವಿದ್ಯಾರ್ಥಿವೇತನ ಯೋಜನೆಗಳು ಮತ್ತು ಫೆಲೋಶಿಪ್ ಯೋಜನೆಗಳು" ಎಂಬ ವಿಷಯದ ಕುರಿತು ಮಾತನಾಡಿದ ಅವರು, ಮೊದಲು ಓದುಗನಾದರೆ ಮಾತ್ರ ಜ್ಞಾನ ಸಂಪಾದನೆ, ಮಾತುಗಾರಿಕೆ ಸಾಧ್ಯ. ಪ್ರತಿಯೊಬ್ಬ ವಿದ್ಯಾರ್ಥಿಯೂ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸಮರ್ಥನೇ. ನಮ್ಮ ಬೆಳವಣಿಗೆ ನಮ್ಮಿಂದ ಮಾತ್ರ ಸಾಧ್ಯ, ಎಂದರು.
"ಒತ್ತಡ ನಿರ್ವಹಣೆ"ಯ ಕುರಿತು ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜ ಕಾರ್ಯ ವಿಭಾಗದ ಸಂಶೋಧನಾರ್ಥಿ ಮತ್ತು ಅತಿಥಿ ಅಧ್ಯಾಪಕರಾದ ಶ್ರೀಮತಿ ವಿನುತ ಕೆ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ.ಸುಧಾ. ಎಂ ವೈದ್ಯ, ಡಾ. ಸುಭಾಷಿಣಿ ಶ್ರೀವತ್ಸ, ಮೊದಲಾದವರು ಉಪಸ್ಥಿತರಿದ್ದರು.
ವಾಣಿಜ್ಯ ವಿಭಾಗದ ಉಪನ್ಯಾಸಕಿ ವರ್ಷ. ವಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಪ್ಲೇಸ್‌ಮೆಂಟ್ ಅಧಿಕಾರಿ ಪ್ರೊ. ಅಬೂಬಕರ್ ಸಿದ್ಧಿಕ್ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಸಹ ಪ್ರಾಧ್ಯಾಪಕ ಡಾ. ಜಗದೀಶ್.ಪಿ ಧನ್ಯವಾದ ಸಮರ್ಪಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ನಿಧಿಶ್ರೀ ಪ್ರಾರ್ಥಿಸಿದರು. ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ