ಬ್ರೇಕಿಂಗ್ ನ್ಯೂಸ್.... ಈಶ್ವರಪ್ಪ ರಾಜಕೀಯ ನಿವೃತ್ತಿ: ಹೈಕಮಾಂಡ್‌ಗೆ ಪತ್ರ

Upayuktha
0

ಬೆಂಗಳೂರು: ಹಿರಿಯ ಬಿಜೆಪಿ ನಾಯಕ ಕೆ.ಎಸ್ ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.  ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆಗೂ ಮೊದಲೇ ಈಶ್ವರಪ್ಪ ಅವರು ಸ್ವ ಇಚ್ಛೆಯಿಂದ ನಿವೃತ್ತಿ ಘೋಷಿಸುತ್ತಿರುವುದಾಗಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ.


ಕಳೆದ 40ಕ್ಕೂ ಹೆಚ್ಚು ವರ್ಷ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ಉಪ ಮುಖ್ಯಮಂತ್ರಿ ವರೆಗೆ ಗೌರವದ ಸ್ಥಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ಅನಂತ ಧನ್ಯವಾದಗಳು ಎಂದು ಪತ್ರದಲ್ಲಿ ಈಶ್ವರಪ್ಪ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.


ಹೊಸಬರಿಗೆ ಅವಕಾಶಗಳನ್ನು ನೀಡಬೇಕೆಂಬ ಪಕ್ಷದ ಹೈಕಮಾಂಡ್ ನಿಲುವು ಸ್ಪಷ್ಟವಾಗಿದ್ದು, ಅದು ಮನವರಿಕೆ ಆದ ಬಳಿಕ ಈಶ್ವರಪ್ಪ ಅವರು ನಿವೃತ್ತಿ ಘೋಷಿಸಿದ್ದಾರೆ. ಯಾವ ಕ್ಷೇತ್ರಕ್ಕೂ ತಮ್ಮ ಹೆಸರು ಘೋಷಿಸಬೇಡಿ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top