ಪುತ್ತೂರು: ವಿವೇಕಾನಂದ ಕಾಲೇಜಿನಲ್ಲಿ ರಕ್ತದಾನ ಶಿಬಿರ

Chandrashekhara Kulamarva
0



ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯುತ್ತ) ಕಾಲೇಜಿನಲ್ಲಿ ರೆಡ್ ಕ್ರಾಸ್, ಎನ್.ಸಿ.ಸಿ, ಎನ್.ಎಸ್.ಎಸ್, ರೋವರ್ ರೇಂಜರ್, ವಿದ್ಯಾರ್ಥಿ ಸಂಘ, ರೋಟರಿ-  ಕ್ಯಾಂಪ್ಕೋ ರಕ್ತ ನಿಧಿ ಕೇಂದ್ರ ಪುತ್ತೂರು, ರೋಟರಿ ರಕ್ತ ನಿಧಿ ಕೇಂದ್ರ, ವೆನ್‍ಲಾಕ್ ಸರ್ಕಾರಿ ಆಸ್ಪತ್ರೆ ಮಂಗಳೂರು, ಪ್ರಾದೇಶಿಕ ರಕ್ತ ನಿಧಿ ಕೇಂದ್ರ ಇದರ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರ ನಡೆಯಿತು.


ಈ ಸಂದರ್ಭದಲ್ಲಿ ರೋಟರಿ ಕ್ಲಬ್ ನ ಅಧ್ಯಕ್ಷ ಪ್ರಶಾಂತ್ ಶೆಣೈ, ವೈದ್ಯಾಧಿಕಾರಿ ಡಾ.ಶರತ್ ಕುಮಾರ್ ರಾವ್, ಕಾಲೇಜಿನ ಐಕ್ಯೂಎಸಿ ಸಂಯೋಜಕ ಪ್ರೊ. ಶಿವಪ್ರಸಾದ್, ಪುತ್ತೂರು ರೋಟರಿ ಕ್ಲಬ್ ನ ಸದಸ್ಯ ವಿಕ್ಟರ್ ಮಾರ್ಟಿಸ್, ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ನರಸಿಂಹ ಭಟ್ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ವೈದ್ಯಾಧಿಕಾರಿ ಡಾ. ರಾಮಚಂದ್ರ ಭಟ್ ಭಾಗವಹಿಸಿದರು. ಸುಮಾರು 186 ಯುನಿಟ್ ರಕ್ತವನ್ನು ವಿದ್ಯಾರ್ಥಿಗಳಿಂದ ಸಂಗ್ರಹಿಸಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


إرسال تعليق

0 تعليقات
إرسال تعليق (0)
To Top