ಉಡುಪಿ: ಎಲ್ಲರಿಗೂ ಆರೋಗ್ಯ ಎಂಬ ಘೋಷ ವಾಕ್ಯದೊಂದಿಗೆ ವಿಶ್ವ ಆರೋಗ್ಯ ದಿನಾಚರಣೆ

Upayuktha
0

 

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಸ್ಪತ್ರೆ ಎನ್.ಸಿ.ಡಿ ವಿಭಾಗ, ಜಿಲ್ಲಾ ಸರ್ವೇಕ್ಷಣಾ ವಿಭಾಗ ಎನ್.ಸಿ.ಡಿ ಘಟಕ, ಸಮುದಾಯ ವೈದ್ಯಕೀಯ ವಿಭಾಗ, ದಂತಚಿಕಿತ್ಸಾ ವಿಭಾಗ ಕೆ.ಎಂ.ಸಿ ಮಣಿಪಾಲ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಹಾಗೂ ಮೆಸ್ಕಾಂ ಉಡುಪಿ ಇವರ ಸಹಯೋಗದಲ್ಲಿ ಎಲ್ಲರಿಗೂ ಆರೋಗ್ಯ ಎಂಬ ಘೋಷ ವಾಕ್ಯದೊಂದಿಗೆ ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ಮೆಸ್ಕಾಂ ಪವರ್ ಮ್ಯಾನ್ ನೌಕರರು ಹಾಗೂ ಕಚೇರಿ ಸಿಬ್ಬಂದಿಗಳಿಗೆ ಆರೋಗ್ಯ ಜಾಗೃತಿ ಹಾಗೂ ಆರೋಗ್ಯ ತಪಾಸಣಾ ಶಿಬಿರವು ನಿನ್ನೆ ಉಡುಪಿಯ ಮೆಸ್ಕಾಂ ಕಚೇರಿಯ ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ ಪ್ರಾಸ್ತಾವಿಕವಾಗಿ ಮಾತನಾಡಿದರು.


ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗಭೂಷಣ ಉಡುಪ ಘೋಷಣಾ ಫಲಕ ಬಿಡುಗಡೆ ಮಾಡಿ, ವಿಶ್ವ ಆರೋಗ್ಯ ದಿನಾಚರಣೆಯ ಕುರಿತು ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ಜಿಲ್ಲಾಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ.ವೀಣಾಕುಮಾರಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಲತಾ ನಾಯಕ್, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೇಷಲಿಟಿ ಕಣ್ಣಿ ನಆಸ್ಪತ್ರೆಯ ತಜ್ಞ ವೈದ್ಯೆ ಡಾ. ಆಕರ್ಷಿತ, ಸಮುದಾಯ ವೈದ್ಯಕೀಯ ವಿಭಾಗದ ಡಾ.ಜಗ್ನೇಶಿನಿ ಮೈಥಿ, ಸಮುದಾಯ ದಂತ ಚಿಕಿತ್ಸಾ ವಿಭಾಗದ ಹೆಚ್.ಓ.ಡಿ ಡಾ.ರಾಮಚಂದ್ರ ಪ್ರಸಾದ್, ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ದಿನೇಶ್‍ ಉಪಾಧ್ಯಾಯ, ಉಪ ನಿಯಂತ್ರಣಾಧಿಕಾರಿ ರಮೇಶ್, ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕ ಗಿರೀಶ್‍ ಕಡ್ಡಿಪುಡಿ, ಉಡುಪಿ ಕೆ.ಪಿ.ಟಿ.ಸಿ.ಎಲ್‍ ಯೂನಿಯನ್ ಪದಾಧಿಕಾರಿಗಳು, ಮೆಸ್ಕಾಂ ಕಚೇರಿಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.


ಜಿಲ್ಲಾ ಆರೋಗ್ಯ ಉಪ ಶಿಕ್ಷಣಾಧಿಕಾರಿ ಚಂದ್ರಕಲಾ ಸ್ವಾಗತಿಸಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಹೆಚ್ ನಿರೂಪಿಸಿ, ಎನ್.ಸಿ.ಡಿ ಕೌನ್ಸಿಲರ್ ಮನು ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top