ಕಾಶ್ಮೀರ: ಪ್ರತ್ಯೇಕ ಎನ್‌ಕೌಂಟರ್, ಇಬ್ಬರು ಉಗ್ರರ ಹತ್ಯೆ

Upayuktha
0

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದ ರಜೌರಿ ಮತ್ತು ಬಾರಾಮುಲ್ಲಾದಲ್ಲಿ ಇಂದು ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.

ನಿನ್ನೆ (ಶುಕ್ರವಾರ) ರಜೌರಿಯಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದರು. ಉಗ್ರರ ಹುಟ್ಟಡಗಿಸಲು ಭದ್ರತಾ ಪಡೆಗಳು ನಿನ್ನೆ ಮಧ್ಯರಾತ್ರಿಯ ಬಳಿಕ 1:15ರ ಸುಮಾರಿಗೆ ತೀವ್ರ ಕಾರ್ಯಾಚರಣೆ ನಡೆಸಿದರು. ರಜೌರಿ ಜಿಲ್ಲೆಯ ಕಂಡಿ ಅರಣ್ಯ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ ಎಂದು ಸೇನಾಪಡೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಲೆಫ್ಟಿನೆಂಟ್ ಕರ್ನಲ್ ದೇವೇಂದರ್ ಆನಂದ್ ತಿಳಿಸಿದರು.


ಜಮ್ಮು ಪೊಲೀಸರು ಮತ್ತು ಸಿಆರ್‌ಪಿಎಫ್‌ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ, 7 ಗಂಟೆಗಳ ಕಾಲ ಉಗ್ರರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಒಬ್ಬ ಉಗ್ರ ಸ್ಥಳದಲ್ಲೇ ಹತನಾಗಿದ್ದಾನೆ. ಇನ್ನೊಬ್ಬ ಕೂಡ ಸತ್ತಿರುವ ಶಂಕೆಯಿದ್ದು, ಮೃತದೇಹಕ್ಕೆ ಹುಡುಕಾಟ ನಡೆಸಲಾಗಿದೆ.


ಸ್ಥಳದಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವುಗಳಲ್ಲಿ ಎಕೆ-56 ರೈಫಲ್‌ಗಳು, ನಾಲ್ಕು ಮ್ಯಾಗಜಿನ್‌ಗಳು (ಮದ್ದುಗುಂಡಿನ ಕೋಶಗಳು), 9 ಎಂಎಂ ಪಿಸ್ತೂಲುಗಳು, ಮೂರು ಗ್ರೆನೇಡ್‌ಗಳು ಮತ್ತು ಇತರ ಮದ್ದುಗುಂಡುಗಳ ಚೀಲ ಸೇರಿದೆ.


ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಜಮ್ಮುವಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು ಎಂದು ಸೇನಾ ಮೂಲಗಳು ಹೇಳಿವೆ.


ಈ ಮಧ್ಯೆ, ಬಾರಾಮುಲ್ಲಾದ ಕರ್ಹಾಮಾ ಕುಂಜರ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮತ್ತೊಬ್ಬ ಉಗ್ರನನ್ನು ಕೊಲ್ಲಲಾಗಿದೆ, ಈತನನ್ನು ಅಬಿದ್ ವಾನಿ ಎಂದು ಗುರುತಿಸಲಾಗಿದ್ದು, ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ ಜೊತೆ ನಂಟು ಹೊಂದಿದ್ದಾನೆ. ಹತನಾದ ಉಗ್ರನನ್ನು ಅಬಿದ್ ವಾನಿ ಎಂದು ಗುರುತಿಸಲಾಗಿದೆ. ಈತ ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್‌ಇಟಿ ಯೊಂದಿಗೆ ಸಂಪರ್ಕ ಹೊಂದಿದ್ದ. ಈತನಿಂದ 01 ಎಕೆ 47 ರೈಫಲ್ ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top