ಉಡುಪಿ: ಅನಧಿಕೃತ ಮರಳು ದಕ್ಕೆಯಲ್ಲಿದ್ದ 5 ಲಾರಿಗಳು ವಶ

Upayuktha
0

ಉಡುಪಿ: ಕುಂದಾಪುರ ತಾಲೂಕು ವಂಡ್ಸೆ ಹೋಬಳಿಯ ಹಟ್ಟಿಯಂಗಡಿ ಹಾಗೂ ಹೆಮ್ಮಾಡಿ ಪರಿಸರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಸಂಧ್ಯಾ ಅವರು ಕಾರ್ಯಾಚರಣೆ ನಡೆಸಿ 5 ಟಿಪ್ಪರ್ ಲಾರಿಗಳನ್ನು ವಶ ಪಡಿಸಿಕೊಂಡಿದ್ದಾರೆ.


ಹಟ್ಟಿಯಂಗಡಿ ಗ್ರಾಮದ ಹಟ್ಟಿಕುದ್ರು ಹಾಗೂ ಹೆಮ್ಮಾಡಿ ಗ್ರಾಮದ ಕನ್ನಡಕುದ್ರು ಎಂಬಲ್ಲಿ ಪಂಚಗಂಗವಲ್ಲಿ ನದಿಯಿಂದ ಅನಧಿಕೃತವಾಗಿ ಮರಳುಗಾರಿಕೆ ನಡೆಸಿ, ಸಾಗಾಟ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸ್ವೀಕೃತವಾದ ದೂರಿನ ಮೇರೆಗೆ ಇಲಾಖೆ ಹಿರಿಯ ಭೂವಿಜ್ಞಾನಿ ಸಂದೀಪ್ ಜಿ.ಯು ಅವರ ಮಾರ್ಗದರ್ಶನದಲ್ಲಿ ಶುಕ್ರವಾರ ರಾತ್ರಿ 10 ಗಂಟೆಯ ಸುಮಾರಿಗೆ ಹಟ್ಟಿಕುದ್ರು ಎಂಬಲ್ಲಿ ಕಾರ್ಯಾಚರಣೆ ನಡೆಸಿ ಮರಳು ದಕ್ಕೆಯಲ್ಲಿದ್ದ 4 ಲಾರಿಗಳನ್ನು ಹಾಗೂ ರಾತ್ರಿ 1 ಗಂಟೆಯ ಸುಮಾರಿಗೆ ಕನ್ನಡಕುದ್ರು ಎಂಬಲ್ಲಿ ದಾಳಿ ನಡೆಸಿ ಮರಳು ಸಹಿತ 1 ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.


ಈ ಕುರಿತು ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ವಹಿಸುವವರೆಗೆ ಅನಧಿಕೃತ ಮರಳು ಸಾಗಾಣಿಕೆಗೆ ಬಳಸುತ್ತಿದ್ದ 4 ಲಾರಿಗಳನ್ನು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ಸುಪರ್ದಿಯಲ್ಲಿ ಹಾಗೂ 1 ಲಾರಿಯನ್ನು ಕುಂದಾಪುರ ಪೊಲೀಸ್ ಠಾಣೆ ಸುಪರ್ದಿಯಲ್ಲಿ ಇರಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಕಟಣೆ ತಿಳಿಸಿದೆ.


ಅಕ್ರಮ ಮರಳು ಗಣಿಗಾರಿಕೆ ತಡೆಯಲು ಕಾರ್ಯಪ್ರವೃತ್ತರಾಗಿ: ತಹಶೀಲ್ದಾರ್ ರವಿ ಎಸ್ ಅಂಗಡಿ

ಉಡುಪಿ: ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ಕುರಿತು ಸಾರ್ವಜನಿಕರಿಂದ ದೂರುಗಳು ಬಂದ ತಕ್ಷಣವೇ ಅಧಿಕಾರಿಗಳು ಕಾರ್ಯಪ್ರವೃತರಾಗಿ ಮರಳು ಸಾಗಾಣಿಕೆಯನ್ನು ತಡೆಯಲು ಕ್ರಮಕೈಗೊಳ್ಳುವಂತೆ ಉಡುಪಿ ತಾಲೂಕು ತಹಶೀಲ್ದಾರ್ ರವಿ ಎಸ್ ಅಂಗಡಿ ಹೇಳಿದರು.


ಅವರು ಶುಕ್ರವಾರ ಉಡುಪಿ ತಾಲೂಕು ಕಚೇರಿಯಲ್ಲಿ ಉಡುಪಿ ತಾಲೂಕು ಮರಳು ಉಪಖನಿಜ ಅಕ್ರಮ ಸಾಗಾಣಿಕೆ, ದಾಸ್ತಾನು ವಿಷಯಗಳ ಕುರಿತು ಟಾಸ್ಕ್ಫೋರ್ಸ್ ಸಮಿತಿ ಸದಸ್ಯರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ಸೂಚಿಸಲಾದ ಇಲಾಖೆಗಳು ನಿಗಧಿಪಡಿಸಿದ ದಿನಗಳಂದು ಗಸ್ತು ನಡೆಸಿ, ಅಕ್ರಮ ಮರಳು ಗಣಿಗಾರಿಕೆಯ ಬಗ್ಗೆ ವರದಿ ನೀಡುವಂತೆ ತಿಳಿಸಿದರು.


ಸಭೆಯಲ್ಲಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಪರಿಸರ ಅಧಿಕಾರಿ ಕೆ.ಎಂ ರಾಜು, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಿನಾಯಕ ಪೂಜಾರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಿರಿಯ ಭೂ ವಿಜ್ಞಾನಿ ಅಶ್ವಿನಿ, ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ರವಿಶಂಕರ್, ಉಪ ತಹಶೀಲ್ದಾರ್ ಐರಿನ್ ನೊರೋಹ್ನ, ಮಲ್ಪೆ ವೃತ್ತ ನಿರೀಕ್ಷಕ ಸುರೇಶ್, ಉಡುಪಿ ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ, ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಮಂಜಪ್ಪ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

 

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top