ಮೆಟ್ರಿಕ್ ಪೂರ್ವ ಬಾಲಕ/ಬಾಲಕೀಯರ ವಿದ್ಯಾರ್ಥಿ ನಿಲಯಗಳ ಪ್ರವೇಶ: ಅರ್ಜಿ ಆಹ್ವಾನ

Upayuktha
0


ಬೆಂಗಳೂರು :
2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರದ ಕಾರ್ಯದರ್ಶಿ ತುಲಸಿ ಮದ್ದಿನೇನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಈ ಇಲಾಖೆಗಳ ವಿದ್ಯಾರ್ಥಿನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ SATS IDಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ: https://shp.karnataka.gov.in/ ಇಲ್ಲಿ ಸಂದರ್ಶಿಸಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂ.15 ಆಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.


ವಿಶೇಷ ಸೂಚನೆ: ವಿದ್ಯಾರ್ಥಿಗಳು 2023-24ನೇ ಸಾಲಿನಲ್ಲಿ ಬೇರೆ ಶಾಲೆಗಳಿಗೆ ಪ್ರವೇಶ ಪಡೆದಿದ್ದರೆ ಸದರಿ ವಿದ್ಯಾರ್ಥಿಗಳ SATS IDಯನ್ನು ಪ್ರಸಕ್ತ ಶಾಲೆಯಲ್ಲಿ, ಸಂಬಂಧಿಸಿದ ಮಾಹಿತಿಯನ್ನು ಇಂಧಿಕರಿಸಿ ಅರ್ಜಿ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top