ಹಿರಿಯ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಯ ಭದ್ರ ಬುನಾದಿ
ಬೆಂಗಳೂರಿನ "ಕ್ಷೇಮವನ" ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ನಿರ್ದೇಶಕಿ ಶ್ರದ್ಧಾ ಅಮಿತ್ ವಾರ್ಷಿಕ ಸ್ನೇಹ ಸಮ್ಮಿಲನವನ್ನು ಉದ್ಘಾಟಿಸಿದರು.
ಉಜಿರೆ: ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣದ ಗುರಿಯಾಗಿದ್ದು ಶಿಕ್ಷಣ ಸಂಸ್ಥೆಯಲ್ಲಿ ದೊರಕುವ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಸದುಪಯೋಗ ಪಡೆದು ಮುಂದೆ ಸಮಾಜದಲ್ಲಿ ಸಭ್ಯ, ಸುಸಂಸ್ಕೃತ ನಾಗರಿಕರಾಗಿ ಆದರ್ಶ ಜೀವನ ನಡೆಸುವ ಹಿರಿಯ ವಿದ್ಯಾರ್ಥಿಗಳು ತಾವು ಕಲಿತ ಶಿಕ್ಷಣ ಸಂಸ್ಥೆಗಳ ಸಾಂಸ್ಕೃತಿಕ ರಾಯಭಾರಿಗಳಾಗಿದ್ದು ಸಂಸ್ಥೆಯ ಭದ್ರ ಬುನಾದಿಯಾಗಿದ್ದಾರೆ ಎಂದು ಎಸ್.ಡಿ.ಎಂ. ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಬೆಂಗಳೂರಿನ ``ಕ್ಷೇಮವನ’’ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ನಿರ್ದೇಶಕಿ ಶ್ರದ್ಧಾಅಮಿತ್ ಹೇಳಿದರು.
ಅವರು ಸೋಮವಾರ ಉಜಿರೆಯಲ್ಲಿ ಎಸ್.ಡಿ.ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮಿಲನವನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಕನಸು ನನಸಾಗಲು ಉಜಿರೆಯಲ್ಲಿ ಕೆ.ಜಿ.ಯಿಂದ ಪಿ.ಜಿ. ವರೆಗಿನ ಎಲ್ಲಾ ತರಗತಿಗಳಲ್ಲಿಯೂ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣದೊಂದಿಗೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಶಿಕ್ಷಣ ನೀಡಲಾಗುತ್ತದೆ. ತಾನು ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿ ವಿದ್ಯಾರ್ಥಿನಿಯಾಗಿ ಪಡೆದ ಸ್ವಾನುಭವವನ್ನು ಅವರು ಧನ್ಯತೆಯಿಂದ ಸ್ಮರಿಸಿದರು.
ಉಜಿರೆಯಲ್ಲಿ ನಡೆದ ವಿಶ್ವ ತುಳು ಸಮ್ಮೇಳನ, ಮಕ್ಕಳ ಮೇಳ ಇದಕ್ಕೆ ಸಾಕ್ಷಿಯಾಗಿದೆ ಎಂದರು. ಡಾ. ಪ್ರದೀಪ್ ನಾವೂರು ಶುಭಾಶಂಸನೆ ಮಾಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಿದರು. ವಕೀಲ ಬಿ.ಕೆ. ಧನಂಜಯ ರಾವ್ ಪ್ರಸ್ತಾವಿಕವಾಗಿ ಮಾತನಾಡಿದರು.
ಪೀತಾಂಬರ ಹೆರಾಜೆ ಸ್ವಾಗತಿಸಿದರು. ಶ್ರೀಧರ ಕೆ.ವಿ. ಧನ್ಯವಾದವಿತ್ತರು. ಡಾ. ದಿವಾ ಕೊಕ್ಕಡ ಕಾರ್ಯಕ್ರಮ ನಿರ್ವಹಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ