ಮಂಗಳೂರು: ರಂಗ ಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ

Upayuktha
0

 


ಮಂಗಳೂರು: ರಂಗಾಯಣದ ರಂಗಶಿಕ್ಷಣದಲ್ಲಿ 2023-24ನೇ ಸಾಲಿನಲ್ಲಿ 10 ತಿಂಗಳ ಡಿಪ್ಲೊಮೊ ಕೋರ್ಸ್‍ಗಳನ್ನು ಸೇರಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು, ಕನಿಷ್ಠ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿರಬೇಕು. 18 ರಿಂದ 28 ವರ್ಷದೊಳಗಿರಬೇಕು. ಆಯ್ಕೆಯಾದವರಿಗೆ ವಸತಿ ವ್ಯವಸ್ಥೆ ಇದ್ದು, ಮಾಹೆಯಾನ 5,000 ರೂ.ಗಳ ವಿದ್ಯಾರ್ಥಿ ವೇತನ ನೀಡಲಾಗುವುದು.


ವೆಬ್‍ಸೈಟ್ https://rangayanamysore.karnataka.gov.in ನಲ್ಲಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಸಲ್ಲಿಸಬೇಕು. ಸಾಮಾನ್ಯ ವರ್ಗದವರಿಗೆ 230 ಹಾಗೂ ಪ.ಜಾ, ಪ.ವರ್ಗ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 180 ರೂ.ಗಳ ಡಿಡಿಯನ್ನು ಉಪ ನಿರ್ದೆಶಕರು, ರಂಗಾಯಣ, ಮೈಸೂರು ಇವರ ಹೆಸರಿನಲ್ಲಿ ಪಡೆದು ರಂಗಾಯಣದ ವಿಳಾಸಕ್ಕೆ ಜೂನ್ 5ರ ಸಂಜೆ 5.30 ರೊಳಗೆ ತಲುಪುವಂತೆ ಕಳುಹಿಸಬೇಕು. ಸಂದರ್ಶನದ ದಿನಾಂಕವನ್ನು ಅಭ್ಯರ್ಥಿಗಳಿಗೆ ಪತ್ರದ ಮುಖೇನ ತಿಳಿಸಲಾಗುವುದು.


ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 0821-2512639, 9448938661, 9148827720, 8867514311 ಸಂಪರ್ಕಿಸುವಂತೆ ರಂಗಾಯಣದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top