ಮೇ 16 ರಂದು ಕೆಲವು ಹಿಂದೂ ಕಾರ್ಯಕರ್ತರನ್ನು ಬಂಧಿಸಿದ್ದ ಪುತ್ತೂರು ಪೊಲೀಸರು ಠಾಣೆಯಲ್ಲಿ ಯುವಕರ ಮೇಲೆ ಹಲ್ಲೆ ನಡೆಸಿ ಥರ್ಡ್ ಡಿಗ್ರಿ ಹಿಂಸೆ ನೀಡಿದ್ದಾರೆ ಎಂದು ದೂರು ದಾಖಲಿಸಲಾಗಿದೆ. ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಹಿಂದೂ ಕಾರ್ಯಕರ್ತರು ಓಬಿಸಿ ವರ್ಗಕ್ಕೆ ಸೇರಿದವರಾಗಿದ್ದಾರೆ.
ಪೊಲೀಸರ ಹಲ್ಲೆಯನ್ನು ಹಲವು ಮಂದಿ ಹಿಂದೂ ಮುಖಂಡರು, ಶಾಸಕರು ತೀವ್ರವಾಗಿ ಖಂಡಿಸಿದ್ದಾರೆ.
ದೌರ್ಜನ್ಯವೆಸಗಿದ ಪೊಲೀಸರ ಮೇಲೆ ಕಠಿಣ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.
ಇದೀಗ ಉಳ್ಳಾಲದ ನಿವಾಸಿ ಅಜಿತ್ ಕುಮಾರ್ ಎಂಬವರು ಈ ಸಂಬಂಧ ರಾಜ್ಯ ಮಾನವಹಕ್ಕು ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ಇತ್ತೀಚಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕೆಲವು ಕಾರ್ಯಕರ್ತರು ಪುತ್ತೂರಿನಲ್ಲಿ ಬಿಜೆಪಿ ನಾಯಕರ ವಿರುದ್ಧ ಆಕ್ಷೇಪಾರ್ಹ ಬ್ಯಾನರ್ ಹಾಕಿ ಪ್ರತಿಭಟನೆ ವ್ಯಕ್ತಪಡಿಸಿದ್ದರು.
ಈ ಪ್ರಕರಣದ ಸೂಕ್ತ ವಿಚಾರಣೆ ನಡೆಸದೆ ಪೊಲೀಸರು ಕೆಲವು ಹಿಂದೂ ಕಾರ್ಯಕರ್ತರನ್ನು ಬಂಧಿಸಿ ಠಾಣೆಯಲ್ಲಿ ದೌರ್ಜನ್ಯ ನಡೆಸಿದ ಘಟನೆ ನಡೆದಿತ್ತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ