ಮಂಗಳೂರು: ಬಜರಂಗದಳವನ್ನು ನಿಷೇಧಿಸುವ ಕಾಂಗ್ರೆಸ್ ಪ್ರಣಾಳಿಕೆಯ ಪ್ರಸ್ತಾವವನ್ನು ಬಿಜೆಪಿಯ ರಾಜ್ಯ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ತೀಕ್ಷ್ಣವಾಗಿ ಖಂಡಿಸಿದ್ದಾರೆ. ಕಾಂಗ್ರೆಸಿಗೆ ಸಾಮರ್ಥ್ಯವಿದ್ದರೆ ತನ್ನ ಆಡಳಿತದ ರಾಜ್ಯಗಳಲ್ಲಿ ಭಜರಂಗದಳವನ್ನು ನಿಷೇಧಿಸಲಿ. ಮುಂದಿನ ಚುನಾವಣೆಯಲ್ಲಿ ಹಿಂದೂ ಸಮಾಜ ಸಮಾಜ ಈ ಸವಾಲನ್ನು ಸ್ವೀಕರಿಸಿ ತಕ್ಕ ಉತ್ತರ ನೀಡಲಿದೆ ಎಂದು ಅವರು ಹೇಳಿದ್ದಾರೆ.
ಈ ಕುರಿತು ಅವರು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯ ಪೂರ್ಣಪಾಠ ಇಂತಿದೆ:
ವಿಶ್ವ ಹಿಂದೂ ಪರಿಷತ್ತಿನ ಯುವ ಘಟಕ ಬಜರಂಗದಳವನ್ನು ನಿಷೇಧ ಮಾಡುವ ಕಾಂಗ್ರೆಸಿನ ಪ್ರಸ್ತಾಪ ಸಮಸ್ತ ಹಿಂದೂ ಸಮಾಜಕ್ಕೆ ಅಘಾತ ನೀಡಿದೆ. ಪಿಎಫ್‌ಐ ಎಂತಹ ದೇಶದ್ರೋಹಿ ಸಂಘಟನೆಯನ್ನು ಬೆಂಬಲಿಸುವ ಮತ್ತು ಪಿಎಫ್‌ಐನ ರಾಜಕೀಯ ಮುಖ ಎಸ್‌ಡಿಪಿಐ ಜೊತೆ ಬೆಂಬಲ ಕೋರುವ ಕಾಂಗ್ರೆಸ್ ಪಕ್ಷ ತನ್ನ ತುಷ್ಟೀಕರಣದ ನೀತಿಯನ್ನು ಮುಂದುವರಿಸಿದೆ. ಕಾಂಗ್ರೆಸಿನ ಹಿಂದೂ ವಿರೋಧಿ ನೀತಿ ಮತ್ತೊಮ್ಮೆ ಸಾಬೀತಾಗಿದೆ.
ರಾಜ್ಯವು ಅತ್ಯಂತ ಪ್ರಮುಖ ಚುನಾವಣೆಯನ್ನು ಎದುರಿಸುವ ಸಂದರ್ಭದಲ್ಲಿ ಸಮಸ್ತ ಹಿಂದೂ ಸಮಾಜವನ್ನು ಅವಮಾನಿಸುವ ಮತ್ತು ವಿಶ್ವ ಹಿಂದೂ ಪರಿಷತ್ತಿನ ಯುವ ಘಟಕ ಬಜರಂಗದಳವನ್ನು ನಿಷೇಧಿಸುತ್ತೇವೆ ಎನ್ನುವ ಕಾಂಗ್ರೆಸ್ಸಿನ ಈ ನಿರ್ಣಯವನ್ನು ತೀವ್ರ ಶಬ್ದಗಳಲ್ಲಿ ಖಂಡಿಸುತ್ತಾ, ಸಮಸ್ತ ಹಿಂದೂ ಸಮಾಜ ಒಂದಾಗಿ ಕಾಂಗ್ರೆಸ್ಸಿನ ಈ ಹಿಂದೂ ವಿರೋಧಿ ನೀತಿಯನ್ನು ತಿರಸ್ಕರಿಸಬೇಕು ಎಂದು ವಿನಂತಿ ಮಾಡುತ್ತಿದ್ದೇನೆ.
-ಕ್ಯಾಪ್ಟನ್ ಗಣೇಶ್ ಕಾರ್ಣಿಕ್
ರಾಜ್ಯ ಬಿಜೆಪಿ ವಕ್ತಾರರು
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ