ಮಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಇದೇ ಮೇ.20 ಹಾಗೂ 21ರಂದು ನಡೆಯಲಿರುವ ಸಿಇಟಿ ಪರೀಕ್ಷೆಗೆ ಜಿಲ್ಲೆಯಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಒಟ್ಟು28 ಪರೀಕ್ಷಾ ಕೇಂದ್ರಗಳಲ್ಲಿ 16,113 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಬೆಳ್ತಂಗಡಿ ತಾಲೂಕಿನ 5 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2,320 ವಿದ್ಯಾರ್ಥಿಗಳು, ಮಂಗಳೂರು ತಾಲೂಕಿನ 14 ಪರೀಕ್ಷಾ ಕೇಂದ್ರಗಳಲ್ಲಿ 6,892, ಮೂಡಬಿದ್ರೆ ತಾಲೂಕಿನ 6 ಪರೀಕ್ಷಾ ಕೇಂದ್ರಗಳಲ್ಲಿ 4,296 ಹಾಗೂ ಪುತ್ತೂರು ತಾಲೂಕಿನ 3 ಪರೀಕ್ಷಾ ಕೇಂದ್ರಗಳಲ್ಲಿ 2,605 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಎದುರಿಸಲಿದ್ದು, ಪರೀಕ್ಷೆ ಸುಸೂತ್ರವಾಗಿ ನಡೆಸಲು ಎಲ್ಲಾ ರೀತಿಯ ಅಗತ್ಯ ಸಿದ್ದತೆಗಳನ್ನು ಜಿಲ್ಲಾಡಳಿತದಿಂದ ಮಾಡಿಕೊಳ್ಳಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ