ವಿದ್ಯಾಗಿರಿ: ದಿ ಇನ್‍ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರಿಸ್ ಆಫ್ ಇಂಡಿಯಾ ಮೇಯಲ್ಲಿ ನಡೆಸಿದ ಕಂಪೆನಿ ಸೆಕ್ರೆಟರಿ ಎಕ್ಸಿಕ್ಯೂಟಿವ್ ಎಂಟ್ರನ್ಸ್ ಟೆಸ್ಟ್(ಸಿಎಸ್‍ಇಇಟಿ)ನಲ್ಲಿ ಆಳ್ವಾಸ್ ಪದವಿ ಪೂರ್ವಕಾಲೇಜಿನ 9 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ 100 ಶೇಕಡಾ ಫಲಿತಾಂಶ ದಾಖಲಿಸಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳಾದ ಆಯುμï ಗೌಡ ಎಂ ವೈ (133), ತಸ್ಮಾಯ್ ಎಂ ಬಪಣ್ಣವರ್ (130), ಅನನ್ಯ ಕೆ ಎ(126), ಕಾಜೋಲ್ ಪಿ(122), ಸಮೃದ್ಧಿ ಜೆ ಆರ್(121), ಪೂರ್ವಿಕ ಎಸ್ ಬಿ(116), ವಂದನಎಸ್(114), ದೀಕ್ಷಾ ಎಲ್(113), ಸಂಹಿತ್ ಕಿರಣ್(108) ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ. ಆಳ್ವಾಸ್ ಪದವಿ ಪೂರ್ವಕಾಲೇಜು ಶೇ 100 ರಷ್ಟು ಫಲಿತಾಂಶ ಪಡೆದಿರುವುದು ಶ್ಲಾಘನೀಯ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ.
ಕಾಲೇಜಿನ ಪ್ರಾಂಶುಪಾಲ ಪ್ರೋ ಸದಾಕಾತ್, ಪದವಿ ಪೂರ್ವ ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ ಡಿ ಹಾಗೂ ಸಿಎಸ್‍ಇಇಟಿ ಸಂಯೋಜಕ ರಾಘವೇಂದ್ರ ಭಟ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ