ಉಡುಪಿ: ವಸ್ತು ಮರು ಪಡೆಯುವ ಸೌಲಭ್ಯಕೇಂದ್ರ ಸ್ಥಾಪನೆ

Upayuktha
0

 


ಉಡುಪಿ: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ವತಿಯಿಂದ ಸ್ವಚ್ಛ ಭಾರತ್ ಮಿಷನ್ ನಗರ 2.0 ಯೋಜನೆಯಡಿ ನವೀಕರಿಸಿ ಮರುಬಳಸಬಹುದಾದಂತಹ ವಸ್ತುಗಳ ಉತ್ಪಾದನೆಯನ್ನು ಕಡಿಮೆಗೊಳಿಸಲು ಮತ್ತು ಸುಸ್ಥಿರ ಜೀವನ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಪರಿಸರವನ್ನು ರಕ್ಷಿಸುವ ಉದ್ದೇಶದಿಂದ ನನ್ನ ಜೀವನ ನನ್ನ ಸ್ವಚ್ಛ ನಗರಯೋಜನೆಯಕಾರ್ಯಕ್ರಮದಡಿ ಕಡಿಮೆಗೊಳಿಸುವುದು, ಮರುಬಳಕೆ ಮತ್ತು ಪುನರ್ ಬಳಕೆ ಕೇಂದ್ರಗಳನ್ನು,ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಒಣತ್ಯಾಜ್ಯ ಸಂಗ್ರಹಣಾಕೇಂದ್ರ ಅಥವಾ ಮೆಟಿರಿಯಲ್‍ ರೆಕವರಿ ಫೆಸಿಲಿಟಿ (ಎಂ.ಆರ್.ಎಫ್) ಹಾಗೂ ನಗರದ ಪ್ರಮುಖ ಸ್ಥಳಗಳಲ್ಲಿ ವಸ್ತು ಮರು ಪಡೆಯುವ ಸೌಲಭ್ಯ ಕೇಂದ್ರಗಳನ್ನು ರೆಡ್ಯೂಸ್, ರೀಯೂಸ್ ಮತ್ತು ರೀಸೈಕಲ್ ಕೇಂದ್ರಗಳಾಗಿ ಬಳಸಿ ನನ್ನಜೀವನ - ನನ್ನ ಸ್ವಚ್ಛ ನಗರ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಉಡುಪಿ ನಗರಸಭೆಯ ವತಿಯಿಂದ ಮೇ 20 ರಿಂದಜೂನ್ 5 ರ ವರೆಗೆ ಮಲ್ಪೆ ಬೀಚ್ ಹತ್ತಿರ, ಮಣ್ಣಪಳ್ಳ ಪಾರ್ಕಿನ ಹತ್ತಿರ, ಬೀಡಿನ ಗುಡ್ಡೆಯ ಒಣತ್ಯಾಜ್ಯ ಸಂಗ್ರಹಣಾ ಕೇಂದ್ರದ ಹತ್ತಿರ, ಬನ್ನಂಜೆ ಕರಾವಳಿ ಬೈಪಾಸ್‍ ಒಣತ್ಯಾಜ್ಯ ಸಂಗ್ರಹಣಾ ಕೇಂದ್ರದ  ಹತ್ತಿರ, ಆದಿ ಉಡುಪಿ ಮಾರ್ಕೆಟ್ ಬಳಿ, ಗಾಂಧಿ ಭವನ ಬಳಿ, ರಿಲಾಯನ್ಸ್ ಫ್ರೆಶ್ ಹತ್ತಿರ ಹಾಗೂ ಡಿ-ಮಾರ್ಟ್ ಬಳಿ ವಸ್ತು ಮರು ಪಡೆಯುವ ಸೌಲಭ್ಯಕೇಂದ್ರವನ್ನು ಸ್ಥಾಪಿಸಲಾಗುವುದು.

 

ಸಾರ್ವಜನಿಕರು ಮೇಲ್ಕಂಡ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಸೇರಿದಂತೆ ಆಟಿಕೆ ವಸ್ತುಗಳನ್ನು, ಬಳಸಿದ ಬಟ್ಟೆ, ದಿನ ಪತ್ರಿಕೆಗಳು, ಹಳೆಯ ಪುಸ್ತಕಗಳು ಹಾಗೂ ಎಲೆಕ್ಟ್ರಾನಿಕ್ ವಸ್ತುಗಳಂತಹ 6 ಬಗೆಯ ನವೀಕರಿಸಿ ಮರುಬಳಸಬಹುದಾದಂತಹ ವಸ್ತುಗಳನ್ನು ಸದರಿ ಕೇಂದ್ರಗಳಿಗೆ ನೀಡಿ, ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು, ಪರಿಸರ ರಕ್ಷಿಸುವ ಉದ್ದೇಶವನ್ನು ಮನಗಂಡು ನಗರಸಭೆಯೊಂದಿಗೆ ಸಹಕರಿಸುವಂತೆ ಹಾಗೂ ಭಾಗವಹಿಸಿದ ಸಾರ್ವಜನಿಕರಿಗೆ ಡಿಜಿಟಲ್ ಪ್ರಮಾಣ ಪತ್ರ ನೀಡಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.  


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top