ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮೇ 1ರಂದು ಆಗಮಿಸಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಕುರಿತು ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಧ್ಯಾಹ್ನ ಕೃಷ್ಣಾಪುರದ ಫಿಝ ಗಾರ್ಡನ್ ಹೆಲಿಪಾಡ್ ಗೆ ಅಗಮಿಸಲಿದ್ದು, ಸುರತ್ಕಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಬಳಿಕ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು.
ದೇವೇಗೌಡರು ನಂತರ ಬಲವಂಡಿ ದೈವಸ್ಥಾನ, ಗುರುಪುರ ಕಂಬಳ ದರ್ಗಾ ಭೇಟಿ ನೀಡಲಿದ್ದಾರೆ. ಸಂಜೆ 5 ಗಂಟೆಗೆ ಗುರುಪುರ ಕೈಕಂಬದ ವಸ್ತು ಪ್ರದರ್ಶನ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮೇ 1 ಕಾರ್ಮಿಕ ದಿನದ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಸಮ್ಮಾನ ನಡೆಯಲಿದೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೇ 5ರಂದು ಕೃಷ್ಣಾಪುರದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಫಾರೂಕ್ ಅವರು ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ