ಮಂಗಳೂರು: ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್‍ನಲ್ಲಿ 2023-24ನೇ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್‍ಗಳಿಗೆ ಮೆರಿಟ್ ಆಧಾರಿತ ಆನ್‍ಲೈನ್ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ.22ರ ವರೆಗೆ ವಿಸ್ತರಿಸಲಾಗಿದೆ.
ಇಲಾಖೆಯ ಅಧಿಕೃತ ವೆಬ್‍ಸೈಟ್‍ಗಳಿಂದ ಅರ್ಜಿ ಡೌನ್‍ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಮೇ.22ರೊಳಗೆ ಸಂಸ್ಥೆಯ ಪ್ರಾಂಶುಪಾಲರಿಗೆ ಸಲ್ಲಿಸಬೇಕು.
ಮೇ.23ರಂದು ಅಂತಿಮ ಮೆರಿಟ್ ಪಟ್ಟಿ ಪ್ರಕಟಣೆ ದಿನ, ಮೇ.24ರಂದು ಸೀಟು ಹಂಚಿಕೆಯ ಪ್ರಕಟಣೆಯದಿನ, ಸೀಟು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ನಿಗದಿತ ಶುಲ್ಕದೊಂದಿಗೆ ಪ್ರವೇಶ ಪಡೆಯಲು ಮೇ.27ರಂದು ಕೊನೆಯ ದಿನ. ಸೀಟುಗಳು ಭರ್ತಿಯಾಗದೇ ಉಳಿಕೆಯಾಗಿದ್ದಲ್ಲಿ ಅಂತಹ ಸೀಟುಗಳನ್ನು ಮೊದಲು ಬಂದವರಿಗೆ ಮೊದಲ ಆದ್ಯತೆಯ ಮೇಲೆ ಪ್ರಾಂಶುಪಾಲರ ಹಂತದಲ್ಲಿಯೇ ಆಫ್-ಲೈನ್ ಮೂಲಕ ಮೇ.29ರಿಂದ ಜೂನ್ 6ರವರೆಗೆ ಹಂಚಿಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‍ಸೈಟ್ www.dtek.kar.nic.in ಅಥವಾ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಮಂಗಳೂರು ಕಚೇರಿಯ ದೂರವಾಣಿ ಸಂಖ್ಯೆ: 0824-2211636, 3500437 ಅನ್ನು ಸಂಪರ್ಕಿಸಬಹುದು ಎಂದು ಪಾಲಿಟೆಕ್ನಿಕ್‍ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ