ಗೋವಿಂದ ದಾಸ ಕಾಲೇಜು: ಸೇವಾ ನಿವೃತ್ತರಿಗೆ ಬೀಳ್ಕೊಡುಗೆ ಸಮಾರಂಭ

Upayuktha
0

ಸುರತ್ಕಲ್: ಪ್ರಜ್ಞಾವಂತ ನಾಗರಿಕರನ್ನು ರೂಪಿಸುವ ಶಿಕ್ಷಕ ವೃತ್ತಿ ಶ್ರೇಷ್ಠತರವಾಗಿದ್ದು ಸಂಸ್ಕೃತ ಭಾಷೆ ಹಾಗೂ ಸಾಹಿತ್ಯದ ಅಧ್ಯಯನ ವಿಶಿಷ್ಟ ಜ್ಞಾನವನ್ನು ಒದಗಿಸುತ್ತದೆ ಎಂದು ಹಿಂದು ವಿದ್ಯಾದಾಯಿನೀ ಸಂಘದ ಅಧ್ಯಕ್ಷ ಜಯಚಂದ್ರ ಹತ್ವಾರ್ ನುಡಿದರು.


ಅವರು ಗೋವಿಂದ ದಾಸ ಕಾಲೇಜಿನ ಸ್ಟಾಫ್ ಅಸೋಸಿಯೇಶನ್ ವತಿಯಿಂದ ನಡೆದ ಸೇವಾ ನಿವೃತ್ತಿ ಹೊಂದಿದ ಗೋವಿಂದ ದಾಸ ಕಾಲೇಜಿನ ಸಂಸ್ಕೃತ ಪ್ರಾಧ್ಯಾಪಕ ವಾಗೀಶ ಶಾಸ್ತ್ರಿ ಮತ್ತು ಗ್ರಂಥಾಲಯ ಸಿಬ್ಬಂದಿ ಚಂದ್ರಶೇಖರ ಕೆ ಅವರ ಬೀಳ್ಕೊಡುಗೆ ಸಮಾರಂಭದ  ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.


ಶಿಕ್ಷಣ ಸಂಸ್ಥೆಯ ಅಭಿವೃದ್ಧಿಯಲ್ಲಿ ಶಿಕ್ಷಕರ ಹಾಗೂ ಆಡಳಿತಾತ್ಮಕ ಸಿಬ್ಬಂದಿಗಳ ಪಾತ್ರ ಹಿರಿದಾದದು ಎಂದು ಇನ್ನೋರ್ವ ಮುಖ್ಯ ಅತಿಥಿ ಹಿಂದೂ ವಿದ್ಯಾದಾಯಿನಿ ಸಂಘದ ಕಾರ್ಯದರ್ಶಿ ಶ್ರೀರಂಗ ಎಚ್ ಅಭಿಪ್ರಾಯಪಟ್ಟರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ. ಕೃಷ್ಣಮೂರ್ತಿ ಪಿ. ಮಾತನಾಡಿ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಪ್ರೋತ್ಸಾಹ ನೀಡುವಲ್ಲಿ ಶಿಕ್ಷಣ ಸಂಸ್ಥೆಯ ಪ್ರತಿಯೊಬ್ಬರ ಪಾತ್ರವೂ ಹಿರಿದಾದುದು ಎಂದರು. ಕಾಲೇಜಿನ ಆಡಳಿತಾತ್ಮಕ  ನಿರ್ದೇಶಕರಾದ ಪ್ರೊ. ರಮೇಶ್ ಕುಳಾಯಿ ಶುಭ ಹಾರೈಸಿದರು.


ಸಂಸ್ಕೃತ ಉಪನ್ಯಾಸಕ ಆಶ್ವಿನ್ ಹಾಗೂ ಗ್ರಂಥಪಾಲಕಿ ಸುಜಾತ ಬಿ ಸನ್ಮಾನ ಪತ್ರವನ್ನು ವಾಚಿಸಿದರು.  ಉಪಪ್ರಾಚಾರ್ಯ ಪ್ರೊ. ರಮೇಶ್ ಭಟ್ ಎಸ್. ಜಿ ಮತ್ತು ಕ್ಯಾಪ್ಟನ್ ಸುಧಾ ಯು ಅಭಿನಂದನಾ ಭಾಷಣ ಮಾಡಿದರು. ಉಪನ್ಯಾಸಕ ಪ್ರೊ. ಮಾರ್ಸೆಲ್ ಲೂವೀಸ್ ಮಸ್ಕರೇನ್ಹಸ್ ಸ್ವಾಗತಿಸಿ ಪ್ರೊ. ಹರೀಶ ಆಚಾರ್ಯ ಪಿ ವಂದಿಸಿದರು. ಅಕ್ಷತಾ ವಿ. ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಉಮಾ ವಾಗೀಶಶಾಸ್ತ್ರಿ ಮೋಹಿನಿ ಚಂದ್ರಶೇಖರ್ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter





Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top