ನಿವೃತ್ತ ಮುಖ್ಯೋಪಾಧ್ಯಾಯ ಮಲ್ಪೆ ರಾಘವೇಂದ್ರ 90ನೇ ಹುಟ್ಟುಹಬ್ಬ ಅಭಿನಂದನಾ ಸಮಾರಂಭ

Upayuktha
0

ಉಡುಪಿ: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯೋಪಾಧ್ಯಾಯರಾದ ಮಲ್ಪೆ ರಾಘವೇಂದ್ರರವರ 90ನೇ ಹುಟ್ಟುಹಬ್ಬ ಮತ್ತು ವಿವಾಹದ 60ನೇ ವಾರ್ಷಿಕೋತ್ಸವದ ಅಂಗವಾಗಿ ಅಭಿನಂದನಾ ಸಮಾರಂಭ ಹಿರಿಯಡ್ಕ ಬ್ರಹ್ಮಶ್ರೀ ನಾರಾಯಣಗುರು ಸಂಘದ ಶ್ರೀ ಮಲ್ಪೆ ರಾಘವೇಂದ್ರ ವೇದಿಕೆಯಲ್ಲಿ ಶುಕ್ರವಾರ ನಡೆಯಿತು.


ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಶ್ರೀಯುತರನ್ನು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸನ್ಮಾನಿಸಿ ಗೌರವಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಾಯಣ ಗುರು ಸೇವಾ ಸಂಘದ ಗೌರವ ಕಾರ್ಯದರ್ಶಿ ರವೀಂದ್ರ ಪೂಜಾರಿ ವಹಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಜೊತೆ ಖಜಾಂಚಿ ಶಿವಾಜಿ ಸುವರ್ಣ ಬೆಳ್ಳೆ, ಮಲ್ಪೆ ಬಿಲ್ಲವ ಸಂಘದ ಅಧ್ಯಕ್ಷ ಗೋಪಾಲ್ ಸಿ ಬಂಗೇರ, ನಿವೃತ್ತ ಸರ್ಕಾರಿ ಅಧಿಕಾರಿ ಸಂಕಪ್ಪ ಬಂಗೇರ, ಬೈದ್ಯ ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ಉಪಾಧ್ಯಕ್ಷ ಶೇಖರ್ ಪೂಜಾರಿ, ಕಲ್ಮಾಡಿ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘದ ಗೌರವಾಧ್ಯಕ್ಷ ಬಿ ಎಂ ಶೇಖರ್, ವೀನಸ್ ಯುಟ್ಯೂಬ್ ಚಾನೆಲ್ ಹರೀಶ್ ಕಲ್ಮಾಡಿ, ಯುವ ಲೇಖಕ  ರಾಘವೇಂದ್ರ ಪ್ರಭು, ಕರ್ವಾಲು ಮುಂತಾದವರಿದ್ದರು.


ಹಿರಿಯಡ್ಕ ಬಿಲ್ಲವ ಸಂಘದ ಪದಾಧಿಕಾರಿಗಳು ಮಲ್ಪೆ ರಾಘವೇಂದ್ರ ಮತ್ತು ಅವರ ಧರ್ಮಪತ್ನಿ ರತ್ನ ಇವರನ್ನು ವಿಶೇಷವಾಗಿ ಗೌರವಿಸಿದರು. ನಾಗರಾಜೇಂದ್ರ ಎಂ ಆರ್ ಸ್ವಾಗತಿಸಿದರು. ಪ್ರಕಾಶ್ ಚಂದ್ರ ಎಂ ಆರ್ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top