ಉಡುಪಿ: ಉಚಿತ ಕಣ್ಣಿನ ತಪಾಸಣಾ ಶಿಬಿರ, ಕನ್ನಡಕ ವಿತರಣೆ

Upayuktha
0

ಉಡುಪಿ: ಜಿಲ್ಲಾ ಸಂಚಾರಿ ನೇತ್ರ ಘಟಕ ಉಡುಪಿ ಜಿಲ್ಲೆ ಇವರ ವತಿಯಿಂದ ಮಲ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಕೊಡವೂರು ಉಪಕೇಂದ್ರದಲ್ಲಿ ಮಂಗಳವಾರ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು.

ಶಿಬಿರದಲ್ಲಿ 173 ಮಂದಿಗೆ ಕಣ್ಣಿನ ತಪಾಸಣೆ ನಡೆಸಲಾಗಿದ್ದು, 47 ಮಂದಿಗೆ ಕನ್ನಡಕವನ್ನು ಉಚಿತವಾಗಿ ನೀಡಲಾಯಿತು. ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದ 18 ಮಂದಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುವುದು.


ಶಿಬಿರದಲ್ಲಿ ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ.ಲತಾ ನಾಯಕ್, ಮಲ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಜೇಷ್ಮ, ಸಮುದಾಯ ಆರೋಗ್ಯ ಅಧಿಕಾರಿ ಮೈತ್ರಿ ಹಾಗೂ ಹಾಗೂ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top