ಸುರತ್ಕಲ್: ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಉತ್ತಮ ಸ್ಪರ್ಧಾ ಮನೋಭಾವವನ್ನು ಬೆಳೆಸಲು ಸಹಕಾರಿಯಾಗಿದೆ. ಕ್ರಿಕೆಟ್ ಯುವಜನರ ಮೆಚ್ಚಿನ ಕ್ರೀಡೆಯಾಗಿದ್ದು ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದು ಹಿಂದೂ ವಿದ್ಯಾದಾಯಿನೀ ಸಂಘದ ಅಧ್ಯಕ್ಷ ಜಯಚಂದ್ರ ಹತ್ವಾರ್ ನುಡಿದರು.
ಅವರು ಗೋವಿಂದದಾಸ ಕಾಲೇಜಿನ ಕ್ರೀಡಾ ವಿಭಾಗವು ಸತತ ಐದು ವರ್ಷಗಳಿಂದ ಆಯೋಜಿಸುತ್ತಿರುವ ಗೋವಿಂದದಾಸ ಪ್ರೀಮಿಯರ್ ಲೀಗ್ ಸೀಸನ್ - 05 ಕ್ರಿಕೆಟ್ ಪಂದ್ಯಾಟದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.
ಆಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ.ಪಿ. ಕೃಷ್ಣಮೂರ್ತಿ ಮಾತನಾಡಿ ಗೋವಿಂದದಾಸ ಕಾಲೇಜು ಕ್ರೀಡಾಸಕ್ತ ವಿದ್ಯಾರ್ಥಿಗಳ ಬೆಳವಣಿಗೆಗೆ ಉತ್ತಮ ಪ್ರೋತ್ಸಾಹ ನೀಡುತ್ತಿದ್ದು ಗೋವಿಂದದಾಸ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ಸತತ ಐದು ವರ್ಷಗಳಿಂದ ಆಯೋಜಿಸುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದರು.
ವೈಭವಿ ಸ್ವಾಗತಿಸಿ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಪ್ರಶಾಂತ್‍ಎಂ.ಡಿ. ವಂದಿಸಿದರು. ಸ್ವಾತಿ ಭಟ್ ಕಾರ್ಯಕ್ರಮ ನಿರೂಪಿಸಿದರು. ಉಪಪ್ರಾಚಾರ್ಯ ಪ್ರೊ. ರಮೇಶ್ ಭಟ್ ಶುಭ ಹಾರೈಸಿದರು.
ಸಮಾರೋಪ ಸಮಾರಂಭದ ಮುಖ್ಯಅತಿಥಿ ಹಿಂದೂ ವಿದ್ಯಾದಾಯಿನೀ ಸಂಘದ ಕಾರ್ಯದರ್ಶಿ ಶ್ರೀರಂಗ ಹೆಚ್ ಮಾತನಾಡಿ ಪಠ್ಯೇತರ ಚುಟವಟಿಕೆಗಳು ಕೂಡ ವಿದ್ಯಾರ್ಥಿಜೀವನದ ಪ್ರಮುಖಅಂಗವಾಗಿದ್ದುಕ್ರಿಕೆಟ್ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸುತ್ತದೆ ಎಂದರು.
ಸ್ವಾತಿ ಎಂ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ನವನೀತ್ ವಂದಿಸಿದರು.
ಪ್ರಜ್ವಲ್ - ಉತ್ತಮ ಬ್ಯಾಟ್ಸ್‌ಮ್ಯಾನ್ ಪ್ರಶಸ್ತಿ, ಪ್ರಥಮ್ - ಉತ್ತಮ ಎಸೆತಗಾರ, ಅಂತಿಮ ಪಂದ್ಯದ ಪಂದ್ಯಶ್ರೇಷ್ಠ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ನಿಹಾಲ್ ಪಡೆದುಕೊಂಡರು.
ಪ್ರಥಮ ಸ್ಥಾನವನ್ನು ಸೀ ಹಾಕ್ಸ್ ತಂಡ ಮತ್ತು ದ್ವಿತೀಯ ಸ್ಥಾನವನ್ನು ರೋರಿಂಗ್ ಲಯನ್ಸ್ ತಂಡವು ಪಡೆದುಕೊಂಡವು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ