ಕಾಲೇಜಿನ ಶೈಕ್ಷಣಿಕ ಅಭಿವೃದ್ಧಿಗೆ ರಕ್ಷಕ ಶಿಕ್ಷಕ ಸಂಘ ಸಹಕಾರಿಯಾಗಬೇಕು: ಜಯಶ್ಚಂದ್ರ ಹತ್ವಾರ್ ಎಚ್

Upayuktha
0


ಸುರತ್ಕಲ್‌:
ರಕ್ಷಕ ಶಿಕ್ಷಕ ಸಂಘವು ಕಾಲೇಜಿನ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿಯಾಗಿ ಕಾರ್ಯ ನಿರ್ವಹಿಸಬೇಕೆಂದು ಹಿಂದು ವಿದ್ಯಾದಾಯಿನೀ ಸಂಘದ ಅಧ್ಯಕ್ಷ ಜಯಶ್ಚಂದ್ರ ಹತ್ವಾರ್ ಎಚ್ ನುಡಿದರು. ಅವರು ಗೊವಿಂದ ದಾಸ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಕರ್ತವ್ಯ ಸ್ವೀಕಾರ ಸಭೆಯಲ್ಲಿ ಮಾತನಾಡಿದರು.


ನೂತನ ಅಧ್ಯಕ್ಷರಾಗಿ ಹರೀಶ್ ಕುಮಾರ್ ಹಾಗೂ ಕಾರ್ಯದರ್ಶಿಯಾಗಿ ಶೈಲಜ ಹೆಚ್ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಅಧ್ಯಕ್ಷ ಯಾದವ ದೇವಾಡಿಗ ವಂದನೆ ಸಲ್ಲಿಸಿದರು.


ಪ್ರಾಂಶುಪಾಲ ಹಾಗೂ ರಕ್ಷಕ ಶಿಕ್ಷಕ ಸಂಘದ ಕೋಶಾಧಿಕಾರಿ ಪ್ರೊ.ಕೃಷ್ಣಮೂರ್ತಿ ಮಾತಾನಾಡಿ ಸಂಘವು ಆರ್ಹ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಯೋಜನೆ, ಶೈಕ್ಷಣಿಕ ಆರ್ಥಿಕ ನೆರವು, ಸಾಧಕ ವಿದ್ಯಾರ್ಥಿಗಳಿಗೆ ಹಾಗೂ ಅಧ್ಯಾಪಕರಿಗೆ ಗೌರವಾಭಿನಂದನೆ, ವಿಚಾರ ಸಂಕಿರಣಗಳ ಆಯೋಜನೆ. ಮೊದಲಾದ ಯೋಜನೆಗಳನ್ನು ರೂಪಿಸಿ ಕಾರ್ಯಾನುಷ್ಠಾನ ಗೊಳಿಸಲಾಗುತ್ತಿದೆ ಎಂದರು. ಆಡಳಿತಾತ್ಮಕ ನಿರ್ದೇಶಕ ಪ್ರೊ. ರಮೇಶ ಕುಳಾಯಿ ಶುಭ ಹಾರೈಸಿದರು. ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷೆ ರಂಜನಿ. ಕಾಲೇಜಿನ ಉಪಪ್ರಾಂಶುಪಾಲ ಪ್ರೊ.ರಮೇಶ್ ಭಟ್ ಎಸ್ ಜಿ, ಆಂತರಿಕ ಗುಣಮಟ್ಟ ಖಾತರಿಕೋಶದ ಸಂಯೋಜಕ ಪ್ರೊ.ಹರೀಶ್ ಆಚಾರ್ಯ, ಪ್ರೊ.ನೀಲಪ್ಪ ವಿ, ಪಾಧ್ಯಾಪಕ ಪ್ರೊ.ವಾಮನ್ ಕಾಮತ್,  ರಕ್ಷಕ ಶಿಕ್ಷಕ ಸಂಘದ ಜೊತೆ ಕಾರ್ಯದರ್ಶಿ ವಿದ್ಯಾ ಸಿ ಪಾಟೀಲ್, ನಿಕಟಪೂರ್ವ ಕಾರ್ಯದರ್ಶಿ ಗೀತಾ, ಸಲಹೆಗಾರದ ಗಂಗಾಧರ ಪೂಜಾರಿ, ಮಾಧವ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top