ಹಂಗಾರಕಟ್ಟೆ: ಚೇತನಾ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Upayuktha
0

ಮಾಬುಕಳ (ಬ್ರಹ್ಮಾವರ): ಚೇತನಾ ಪ್ರೌಢಶಾಲೆಯ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ದೀಪ ಬೆಳಗಿಸುವುದರ ಮೂಲಕ ವಿಧ್ಯುಕ್ತವಾಗಿ ಪ್ರಾರಂಭಗೊಂಡಿತು. ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಬ್ಯಾಂಡ್ ಮತ್ತು ವಾದ್ಯ ಘೋಷದೊಂದಿಗೆ ಸ್ವಾಗತಿಸಲಾಯಿತು.


ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಬಿ. ಭರತ್ ಕುಮಾರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಫಾರ್ಚೂನ್ ಕಾಲೇಜ್ ಆಫ್ ನರ್ಸಿಂಗ್ ಇದರ ಚೇರ್ಮನ್ ತಾರಾನಾಥ ಶೆಟ್ಟಿ ಮತ್ತು ಬಿ.ಡಿ. ಶೆಟ್ಟಿ ಕಾಲೇಜಿನ ಪ್ರಾಂಶುಪಾಲರಾದ ಸ್ಮಿತಾಮೋಲ್. ಹಳೆ ವಿದ್ಯಾರ್ಥಿ ಹರೀಶ್ ಕಿರಣ್ ತುಂಗ, ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ವಿಘ್ನೇಶ್ವರ ಅಡಿಗ ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಎಲ್ಲಾ ಪೋಷಕ ಬಂಧುಗಳು ಹಾಜರಿದ್ದರು.


ಚೇತನಾ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಕಲ್ಪನಾ ಶೆಟ್ಟಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸರ್ವರನ್ನು ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಹರ್ಷವರ್ಧನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಹೊಸದಾಗಿ ದಾಖಲಾತಿಯಾದ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ, ಬ್ಯಾಗ್, ಪಠ್ಯಪುಸ್ತಕ ಮತ್ತು ನೋಟ್ ಪುಸ್ತಕ ವಿತರಿಸಲಾಯಿತು. ಅಧ್ಯಾಪಕರಾದ ಚಂದ್ರ ಸರ್ವರನ್ನು ವಂದಿಸಿದರು. ವಿದ್ಯಾರ್ಥಿಗಳಿಗೆ ಸಿಹಿತಿಂಡಿ ಹಂಚಿ, ಮಧ್ಯಾಹ್ನ ಸಿಹಿಯೂಟವನ್ನು ನೀಡಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top