ಧರ್ಮಸ್ಥಳದಲ್ಲಿ ಹತ್ತನಾವಧಿ (ತುಳು: ಪತ್ತನಾಜೆ)ಉತ್ಸವ

Upayuktha
0

ಉಜಿರೆ: ಧರ್ಮಸ್ಥಳದಲ್ಲಿ ಹತ್ತನಾವಧಿ (ತುಳು: ಪತ್ತನಾಜೆ) ನಿಮಿತ್ತಗುರುವಾರದೇವಸ್ಥಾನದಲ್ಲಿರಂಗಪೂಜೆ, ಬಲಿ ಉತ್ಸವ, ವಸಂತ ಪೂಜೆ, ಅಷ್ಟಾವಧಾನ ಸೇವೆಗಳು ನಡೆದವು. ಧ್ವಜಮರ ಅವರೋಹಣ ನಡೆಯಿತು.


ದೀಪಾವಳಿವರೆಗೆ ದೇವಸ್ಥಾನದಲ್ಲಿ ರಂಗಪೂಜೆ, ಉತ್ಸವ ಮೊದಲಾದ ವಿಶೇಷ ಸೇವೆಗಳು ನಡೆಯುವುದಿಲ್ಲ.


ಧರ್ಮಸ್ಥಳ ಯಕ್ಷಗಾನ ಮೇಳದ ಶ್ರೀ ಮಹಾಗಣಪತಿ ದೇವರ ಮೂರ್ತಿಯನ್ನು ಗುರುವಾರ ಸಂಜೆ ಬಿಡಾರದ ಮಣೆಗಾರರ ಮನೆಯಿಂದ ಭವ್ಯ ಮೆರವಣಿಗೆಯಲ್ಲಿ ಬರಮಾಡಿಕೊಳ್ಳಲಾಯಿತು. ಕ್ಷೇತ್ರದ ಆನೆಗಳು, ಬಸವ, ಹೂವಿನ ಕೋಲು, ವಾದ್ಯ ಮೇಳ, ಚೆಂಡೆ ಮೇಳ, ಶಂಖ-ಜಾಗಟೆ ವಾದನ ಮೆರವಣಿಗೆಗೆ ವಿಶೇಷ ಮೆರುಗನ್ನು ನೀಡಿತು. ದೇವಸ್ಥಾನದ ಎದುರು ದರ್ಶನ ಸೇವೆ ನಡೆಸಿದ ಬಳಿಕ ಛತ್ರದ ಶ್ರೀ ಮಹಾಗಣಪತಿಗುಡಿಗೆ ಮೆರವಣಿಗೆಯಲ್ಲಿ ಕರೆತರಲಾಯಿತು.


ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಡಿ. ಹಷೇರ್ಂದ್ರಕುಮಾರ್ ಮತ್ತುಕುಟುಂಬಸ್ಥರು, ನೌಕರರು ಹಾಗೂ ಭಕ್ತರು ಉಪಸ್ಥಿತರಿದ್ದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top