ಉಡುಪಿ: ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಲು ದೈಹಿಕವಾಗಿ ಸದೃಢರಾಗಿರುವುದು ಅತೀ ಅಗತ್ಯ. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ದೈಹಿಕ ಕ್ಷಮತೆಯನ್ನು ಕಾಪಾಡಿಕೊಳ್ಳಲು ಈ ತರಬೇತಿಯು ಸಹಕಾರಿಯಾಗಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಹೇಳಿದರು.
ಅವರು ಇತ್ತೀಚೆಗೆ, ಮಲ್ಪೆ ಸಿ.ಎಸ್.ಪಿ ಕೇಂದ್ರ ಕಚೇರಿಯಲ್ಲಿ, ಕರಾವಳಿ ಕಾವಲು ಪೊಲೀಸ್ ಘಟಕದ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ ಮೂರನೇ ತಂಡದ ತರಬೇತಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ನವ ಮಂಗಳೂರು ಬಂದರು ಮಂಡಳಿ ಕೇಂದ್ರೀಯ ಕೈಗಾರಿಕಾ ಭದ್ರತಾ ದಳದ ಡೆಪ್ಯುಟಿ ಕಮಾಂಡೆಂಟ್ ಅಶುತೋಷ್ ಗೌರ್ ಮಾತನಾಡಿ, ಉದ್ಯೋಗದಲ್ಲಿ ತರಬೇತಿಯು ಅತೀ ಅಗತ್ಯವಾಗಿದ್ದು, ತರಬೇತಿಯಿಂದ ಇಲಾಖೆಯಲ್ಲಿ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯ ಎಂದರು.
ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಅಬ್ದುಲ್ ಅಹದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಡಿವೈಎಸ್‌ಪಿ ಹಾಗೂ ತರಬೇತಿ ಸಂಸ್ಥೆಯ ಉಪಪ್ರಾಂಶುಪಾಲ ಟಿ.ಎಸ್ ಸುಲ್ಫಿ ಸ್ವಾಗತಿಸಿ, ನಿಸ್ತಂತು ವಿಭಾಗದ ಪಿ.ಎಸ್.ಐ ಮನಮೋಹನ ನಿರೂಪಿಸಿ, ಕ್ರೈಂ ವಿಭಾಗದ ಪಿ.ಐ ಪ್ರಮೋದ್ ಕುಮಾರ್ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ