ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ನಾಳೆ (ಮೇ 8) ಪ್ರಕಟ

Upayuktha
0

ಬೆಂಗಳೂರು: ಕರ್ನಾಟಕದ ಎಸ್ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವು ನಾಳೆ (ಮೇ 8) ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಈ ಬಗ್ಗೆ ಇಂದು ಮಾಹಿತಿ ನೀಡಿದೆ.


ರಾಜ್ಯಾದ್ಯಂತ 3,305 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆದಿತ್ತು. ಇದೀಗ ಮೌಲ್ಯಮಾಪನ ಪ್ರಕ್ರಿಯೆಯು ಪೂರ್ಣಗೊಂಡಿದೆ. ಎಸ್‌ಎಸ್‌ಎಲ್‌ಸಿಯ ವಾರ್ಷಿಕ ಪರೀಕ್ಷೆಯಲ್ಲಿ ಈ ಬಾರಿ 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಮಾರ್ಚ್ 31ರಿಂದ ಏಪ್ರಿಲ್‌ 15ರವರೆಗೆ ಪರೀಕ್ಷೆ ನಡೆದಿದ್ದವು.


ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. karresults.nic.in ಮೂಲಕ ಫಲಿತಾಂಶವನ್ನು ತಿಳಿಯಬಹುದಾಗಿದೆ. ಬೆಳಗ್ಗೆ 11 ಗಂಟೆಯ ನಂತರ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top