ಕುಂಬಳೆ: 2022-23ನೆಯ ಸಾಲಿನ ಕೇರಳ ರಾಜ್ಯ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದ ಎಲ್ಲಾ ವಿದ್ಯಾರ್ಥಿಗಳು ಯಾವುದೇ ಗ್ರೇಸ್ ಮಾರ್ಕ್ ಇಲ್ಲದೆ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದಾರೆ.
2 ಮಂದಿ ವಿದ್ಯಾರ್ಥಿಗಳು ಎಲ್ಲಾ ಹತ್ತು ವಿಷಯಗಳಲ್ಲೂ ಎ ಪ್ಲಸ್ ಪಡೆದು ಶಾಲೆಗೆ ಹಾಗೂ ಹೆತ್ತವರಿಗೆ ಕೀರ್ತಿ ತಂದಿರುತ್ತಾರೆ. ಶಾಲೆಯ ಹೆಮ್ಮೆಯ ಸಾಧಕ ವಿದ್ಯಾರ್ಥಿಗಳಿಗೆ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಆಡಳಿತ ಮಂಡಳಿ, ಹಾಗೂ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿರುತ್ತಾರೆ. ಮನೀಶ್ ಕುಮಾರ್ ಮತ್ತು ಜತನ್ ಸಿ.ವಿ ಎಲ್ಲಾ ವಿಷಯದಲ್ಲಿ ಎಪ್ಲ ಸ್ ಅಂಕ ಪಡೆದಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ