ವಿವಿ ಸಂಧ್ಯಾ ಕಾಲೇಜು: ರಾಜ್ಯಮಟ್ಟದ ಮ್ಯಾನೇಜ್ಮೆಂಟ್ ಹಾಗೂ ಸಾಂಸ್ಕೃತಿಕ ಫೆಸ್ಟ್

Upayuktha
0

 


ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ಎಂಬಿಎ (ಐಬಿ) ವಿಭಾಗವು ಅದರ ಹಳೆವಿದ್ಯಾರ್ಥಿ ಸಂಘ "ಅಂಬಾ" ದ ಸಹಯೋಗದೊಂದಿಗೆ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ "ಇಕ್ವಿನಾಕ್ಸ್ 2K23-ಚಕ್ರವ್ಯೂಹ" ಎಂಬ ರಾಜ್ಯಮಟ್ಟದ ಮ್ಯಾನೇಜ್ಮೆಂಟ್ ಮತ್ತು ಸಾಂಸ್ಕೃತಿಕ ಹಬ್ಬವನ್ನು ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಮೇ 27(ಶನಿವಾರ) ಮಧ್ಯಾಹ್ನ 1:30 ಕ್ಕೆ ಆಯೋಜಿಸಿದೆ. 


ಕಾರ್ಯಕ್ರಮವನ್ನು ಹೇರಂಬ ಕೈಗಾರಿಕೋದ್ಯಮದ ನಿರ್ದೇಶಕ ಸದಾಶಿವಶೆಟ್ಟಿ ಕನ್ಯಾನ ಇವರು ಉದ್ಘಾಟಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥ ಡಾ. ಪುಟ್ಟಣ್ಣ. ಕೆ ಮುಖ್ಯ ಅತಿಥಿಯಾಗಿರಲಿದ್ದಾರೆ. ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಡಾ. ಲಕ್ಷ್ಮೀದೇವಿ.ಎಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಎಂಬಿಎ (ಐಬಿ) ವಿಭಾಗದ ಸಂಯೋಜಕ ಡಾ.ಜಗದೀಶ್.ಬಿ ಉಪಸ್ಥಿತರಿರಲಿದ್ದಾರೆ. ಕಶ್ಯಪ್ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಪ್ರದೀಪ್ ಕುಮಾರ್ ಹಾಗೂ ಆಥರ್ ಸಂಸ್ಥೆಯ ವ್ಯವಸ್ಥಾಪಕ ಕಾರ್ತಿಕ್ ಹೆಗ್ಡೆ ಸಮಾರೋಪ ಸಮಾರಂಭದಲ್ಲಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮ್ಯಾನೇಜ್ಮೆಂಟ್ ಫೆಸ್ಟ್‌ನಲ್ಲಿ ಉತ್ತಮ ನಿರ್ವಹಣಾ ತಂಡ, ನಿಧಿಶೋಧ, ಮಹಿಳಾ ಉದ್ಯಮಶೀಲತೆ ಮೊದಲಾದ ಸ್ಪರ್ಧೆಗಳನ್ನು ಹಾಗೂ ಪದವಿ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಫೆಸ್ಟ್‌ನಲ್ಲಿ ಹತ್ತಕ್ಕೂ ಹೆಚ್ಚು ಕಾಲೇಜುಗಳ ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗಗಳು ಭಾಗವಹಿಸಲಿವೆ. 


ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

ರಾಜೇಶ್ ಕುಮಾರ್ - 8762054920

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top