ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಮತ್ತು ಸೂರಜ್ ಪದವಿ ಪೂರ್ವ ಕಾಲೇಜು ಮುಡಿಪು ಸಹಯೋಗದೊಂದಿಗೆ, ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಕಾರ್ಯಕ್ರಮ - ಸಾಹಿತಿ ಭಾ. ಭ. ಮಜಿಬೈಲು ದತ್ತಿ (ದತ್ತಿ ಕೊಡುಗೆ : ಶ್ರೀಮತಿ ಸವಿತಾ ಭಂಡಾರಿ)ಸೂರಜ್ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮಿ ಬಿ.ಶೆಟ್ಟಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ವಿದ್ಯಾರ್ಥಿಗಳು ನಾಡಗೀತೆ ಹಾಡಿದರು.
ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಡಾ. ಮಂಜುನಾಥ ಎಸ್.ರೇವಣ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.
ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಗೌರವ ಕಾರ್ಯದರ್ಶಿ ಡಾ. ಮುರಲೀಮೋಹನ್ ಚೂಂತಾರು ಸ್ವಾಗತಿಸಿದರು.
ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಗೌರವ ಕೋಶಾಧಿಕಾರಿ ಎನ್.ಸುಬ್ರಾಯ ಭಟ್ ಇವರು ಸಾಹಿತಿ ಭಾಸ್ಕರ ಭಂಡಾರಿ ಮಜಿಬೈಲು ಇವರ ಬಗ್ಗೆ ಮತ್ತು ಅವರ ಸಾಹಿತ್ಯದ ಕುರಿತು ಉಪನ್ಯಾಸಗೈದರು. ಮಂಗಳೂರು ತಾಲೂಕು ಘಟಕದ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಶ್ರೀ ಗಣೇಶ್ ಪ್ರಸಾದ್ ಜೀ, ಕಾರ್ಯಕ್ರಮ ನಿರೂಪಿಸಿದರು
ಸೂರಜ್ ಕಾಲೇಜು ಪ್ರಾಂಶುಪಾಲ ಡಾಲ್ಫಿ ಸಿಕ್ವೇರಾ ವಂದಿಸಿದರು. ಸದ್ರಿ ಕಾರ್ಯಕ್ರಮದಲ್ಲಿ ಸುಮಾರು ಎಪ್ಪತ್ತು ಮಂದಿ ವಿದ್ಯಾರ್ಥಿಗಳು ಹಾಜರಿದ್ದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ