ಸುರತ್ಕಲ್: ಪರಿಣಾಮಕಾರಿ ಆರ್ಥಿಕ ಹೂಡಿಕೆ ಹಾಗೂ ಆರ್ಥಿಕ ನಿರ್ವಹಣೆ ಪರಿಕಲ್ಪನೆ ವಿದ್ಯಾರ್ಥಿಗಳಲ್ಲಿರಬೇಕು ಎಂದು ಮಂಗಳೂರು ವಿಶ್ವ ವಿದ್ಯಾನಿಲಯ ವಾಣಿಜ್ಯ ಶಾಸ್ತ್ರ ಉಪನ್ಯಾಸಕರ ಸಂಘ (ಮುಕ್ತಾ) ದ ಕಾರ್ಯದರ್ಶಿ ಪ್ರೊ. ಲೂಯಿಸ್ ಮನೋಜ್ ಅಂಬ್ರೋಸ್ ನುಡಿದರು.
ಅವರು ಗೋವಿಂದ ದಾಸ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ, ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗ ಹಾಗೂ ಮಂಗಳೂರು ವಿಶ್ವ ವಿದ್ಯಾನಿಲಯ ವಾಣಿಜ್ಯ ಶಾಸ್ತ್ರ ಪ್ರಾಧ್ಯಾಪಕರ ಸಂಘ (ಮುಕ್ತಾ) ಗಳ ಸಹ ಭಾಗಿತ್ವದಲ್ಲಿ ನಡೆದ ಆರ್ಥಿಕ ಹೂಡಿಕೆದಾರ ಅರಿವಿನ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಹಣ ಕಾಸಿನ ಹೂಡಿಕೆಯ ಉದ್ದೇಶಗಳು ಹಾಗೂ ಸಾಧ್ಯತೆಗಳು ಕುರಿತಂತೆ ಅರಿವನ್ನು ಮೂಡಿಸಿಕೊಳ್ಳುವುದರಿಂದ ಉತ್ತಮ ಹೂಡಿಕೆದಾರರಾಗುವ ಅವಕಾಶಗಳಿವೆ ಎಂದವರು ನುಡಿದರು. ಎಲ್ಲಾ ಜ್ಞಾನ ಶಾಖೆಗಳ ಪದವಿ ವಿದ್ಯಾರ್ಥಿಗಳಿಗೂ ಅರಿವನ್ನು ಮೂಡಿಸಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೂ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ಕಾರ್ಯಾಗಾರ ಉದ್ಘಾಟಿಸಿದ ಗೋವಿಂದ ದಾಸ ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ.ರಮೇಶ್ ಕುಳಾಯಿ ಮಾತನಾಡಿ, ವಿದ್ಯಾರ್ಥಿಗಳು ಹೂಡಿಕೆಗೆ ಸಂಬಂಧಿಸಿದ ಯೋಜನೆಗಳನ್ನು ಅರಿತು ಕೊಂಡು ಸಮಗ್ರ ಹಣಕಾಸಿನ ನಿರ್ವಹಣೆ ಕಲೆಯನ್ನು ಕರಗತ ಮಾಡಿಕೊಳ್ಳಬೇಕೆಂದರು.
ಕಾಲೇಜಿನ ಪ್ರಾಂಶುಪಾಲ ಪ್ರೊ.ಪಿ.ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಆರ್ಥಿಕ ಹೂಡಿಕೆ ತಜ್ಞರಾದ ನವೀನ್ ರೇಗೊ, ಲಿಯೋ ಅಮಲ್ ಎ, ವೈವ್ಯೆನಿಲ್ ಡಿ’ಸೋಜಾ ಸಂಪನ್ಮೂಲವ್ಯಕ್ತಿಗಳಾಗಿದ್ದರು.
ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಸೌಮ್ಯ ಪ್ರವೀಣ್ ಕೆ, ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ಶ್ರೀದೇವಿ, ಪ್ರಾಧ್ಯಾಪಕರಾದ ಡಾ.ಗಣೇಶ್ ಆಚಾರ್ಯ ಉಪಸ್ಥಿತರಿದ್ದರು.
ವೈಭವಿ ಸ್ವಾಗತಿಸಿದರು. ಶ್ರೇಯಾ ಮಹಾಲೆ ವಂದಿಸಿದರು. ಅರ್ಪಿತಾ ಅತಿಥಿಗಳನ್ನು ಪರಿಚಯಿಸಿದರು. ವೈಷ್ಣವಿ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ