ಮಂಗಳೂರು ವಿ.ವಿ ಅಂತರ್‌ ವಲಯ ಥ್ರೋಬಾಲ್ ಚಾಂಪಿಯನ್‍ಶಿಪ್: ಸತತ 5ನೇ ಬಾರಿ ಆಳ್ವಾಸ್ ಚಾಂಪಿಯನ್

Upayuktha
0

ಮೂಡುಬಿದಿರೆ: ಮಂಗಳೂರು ವಿ.ವಿ. ಮತ್ತು ಹೆಬ್ರಿ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಆಶ್ರಯದಲ್ಲಿ ನಡೆದ ಅಂತರ ವಲಯ ಮಹಿಳೆಯರ ಥ್ರೋಬಾಲ್ ಚಾಂಪಿಯನ್‍ಶಿಪ್‍ನಲ್ಲಿ ಆಳ್ವಾಸ್ ಕಾಲೇಜು ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿತು.


ಮಂಗಳೂರು ವಿ.ವಿ. ಅಂತರ ವಲಯ ಟೂರ್ನಿಯ ಸೆಮಿಫೈನಲ್‍ನ್ನು ಆಳ್ವಾಸ್ ತಂಡವು ಪದುವಾ ಕಾಲೇಜು ಮಂಗಳೂರು ತಂಡವನ್ನು ಸೋಲಿಸಿ ಫೈನಲ್‍ಗೆ ಅರ್ಹತೆಯನ್ನು ಪಡೆದುಕೊಂಡಿತು. ಫೈನಲ್ ಟೂರ್ನಿಯಲ್ಲಿ ಆಳ್ವಾಸ್ ತಂಡ, ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜು ತಂಡದ ವಿರುದ್ಧ 2-0 ನೇರ ಸೆಟ್‍ಗಳ ಅಂತರದಿಂದ ಗೆಲುವು ಸಾಧಿಸಿ ಚಾಂಪಿಯನ್ ತಂಡವಾಗಿ ಹೊರಹೊಮ್ಮಿದೆ.

ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top