ದೊಡ್ಡಬೈರನಕುಪ್ಪೆ: ಮಂಗಳೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಸಮಾಜ ಕಾರ್ಯ ಸಂಶೋಧನಾ ಮತ್ತು ಅಧ್ಯಯನ ಮಂಗಳಗಂಗೊತ್ರಿ ಕೊಣಾಜೆ, ಸಮಾಜ ಕಾರ್ಯ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾದ ಸಮಾಜಕಾರ್ಯ ಗ್ರಾಮೀಣ ಅಧ್ಯಯನ ಶಿಬಿರದ 5 ನೇ ದಿನದ ಅಂಗವಾಗಿ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ದೊಡ್ಡಬೈರನಕುಪ್ಪೆ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಬಾಲ್ಯ ವಿವಾಹ ಎಂಬ ವಿಷಯದ ಕುರಿತು ಜಾಗೃತಿ ಸಲುವಾಗಿ ಬೀದಿನಾಟಕ ಪ್ರದರ್ಶಿಸಿದರು. ಈ ಕಾರ್ಯಕ್ರಮದಲ್ಲಿ ವಿಭಾಗದ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಸಮಾಜ ಕಾರ್ಯ ವಿಭಾಗದ ಉಪನ್ಯಾಸಕರು ಶ್ರೀಮತಿ ವಿನುತಾ ಹಾಗೂ ದೀಪಕ್. ಬಿ ಮತ್ತು ದೊಡ್ಡಬೈರನಕುಪ್ಪೆ ಪ್ರಾಥಮಿಕ ಅರೋಗ್ಯ ಕೇಂದ್ರದ ಅಡಳಿತ ಅದಿಕಾರಿ ಶ್ರೀಕಾಂತ್ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ