ವಿವಿ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣಪದ್ಧತಿ ಕುರಿತ ರಾಷ್ಟ್ರೀಯ ವಿಚಾರಸಂಕಿರಣ
ಮಂಗಳೂರು: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿ- 2020ಯ ಅನುಷ್ಠಾನದಲ್ಲಿ ಸವಾಲುಗಳಿವೆ. ಅವುಗಳನ್ನು ಮೆಟ್ಟಿ ನಿಂತು ವಿದ್ಯಾರ್ಥಿಗಳನ್ನು ದೇಶದ ಆಸ್ತಿಯನ್ನಾಗಿಸುವುದೇ ಎಲ್ಲರ ಗುರಿಯಾಗಿದೆ. ದೇಶ ಮೊದಲು, ನಂತರ ವ್ಯಕ್ತಿತ್ವ ಮತ್ತು ಶಿಕ್ಷಕ ಎಂಬ ಚಿಂತನೆ ಎಲ್ಲಾ ವಿದ್ಯಾರ್ಥಿಗಳಲ್ಲಿರಬೇಕು, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅಭಿಪ್ರಾಯಪಟ್ಟರು.
ಅವರು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಶುಕ್ರವಾರ ನಡೆದ, ಕರ್ನಾಟಕ ರಾಜ್ಯಮಹಾವಿದ್ಯಾಲಯ ಶಿಕ್ಷಕಸಂಘದ ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗವು, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣಪರಿಷತ್, ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜುಗಳ ಸಹಯೋಗದಲ್ಲಿ ‘ರಾಷ್ಟ್ರೀಯ ಶಿಕ್ಷಣಪದ್ಧತಿ 2020 ರ ಅನುಷ್ಠಾನ: ಸವಾಲುಗಳು ಮತ್ತು ಭವಿಷ್ಯ-ಪಠ್ಯಕ್ರಮ, ಮೌಲ್ಯಮಾಪನ, ಫಲಿತಾಂಶʼ ಎಂಬ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆವಹಿಸಿ ಮಾತನಾಡಿದರು.
ಎಬಿಆರ್‍ಎಸ್‌ಎಂ ನ ಮಧ್ಯಕ್ಷೇತ್ರೀಯ ಪ್ರಮುಖ್ ಡಾ. ರಘುಅಕಮಂಚಿ ಮಾತನಾಡಿ, ಶಿಕ್ಷಕರು ಎನ್ಇಪಿಯ ಸಾಧಕ-ಬಾಧಕಗಳನ್ನು ಸರಿಯಾಗಿ ತಿಳಿದುಕೊಳ್ಳಬೇಕು. ಬುದ್ಧಿಯ ಜೊತೆಗೆ ಹೃದಯಕ್ಕೂ ಶಿಕ್ಷಣ ನೀಡಿ ವಿದ್ಯಾರ್ಥಿಗಳಲ್ಲಿ ಮಾನವೀಯತೆ ಬೆಳೆಯುವಂತೆ ಮಾಡುವ ಉದ್ದೇಶ ಈ ಶಿಕ್ಷಣ ನೀತಿಗಿದೆ, ಎಂದರು. ಮುಖ್ಯ ಅತಿಥಿ, ಎಬಿಆರ್‍ಎಸ್‌ಎಂ ರಾಷ್ಟ್ರೀಯಸಂಘಟನಾ ಜೊತೆ ಕಾರ್ಯದರ್ಶಿ ಜಿ. ಲಕ್ಷ್ಮಣ್ ಅವರು ಮಾತನಾಡಿ, ಹೊಸ ಶಿಕ್ಷಣನೀತಿ ಹೊಸ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳನ್ನು ತಯಾರು ಮಾಡುತ್ತದೆ, ಎಂದರು.
ವಿಶ್ವವಿದ್ಯಾನಿಲಯ ಅನುದಾನ ಆಯೋಗದ (ಯುಜಿಸಿ) ಕಾರ್ಯದರ್ಶಿ ಪ್ರೊ. ಮನೀಶ್ ಆರ್. ಜೋಷಿ ದಿಕ್ಸೂಚಿ ಭಾಷಣ ಮಾಡಿದರು. ಬೆಂಗಳೂರು ಕೆಆರ್‍ಎಂಎಸ್ಎಸ್ ರಾಜ್ಯಾಧ್ಯಕ್ಷ ಡಾ.ಗುರುನಾಥ್ ಬಡಿಗೇರ್, ಸಲಹಾ ಸಮಿತಿಯ ಮುಖ್ಯಸ್ಥ,ಮಂಗಳೂರು ವಿಶ್ವವಿದ್ಯಾನಿಲಯದ ಯೋಜನೆ ಮೇಲ್ವಿಚಾರಣೆ ಮತ್ತು ಮೌಲ್ಯ ಮಾಪನಮಂಡಳಿಯ ನಿರ್ದೇಶಕ ಡಾ. ಮಂಜಯ್ಯ, ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ರಮೇಶ್ ಕುಮಾರ್ ಮೊದಲಾದವರು ವೇದಿಕೆಯಲ್ಲಿದ್ದರು.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಭೇಟಿ ನೀಡಿದರು. ಕೆಆರ್‍ಎಂಎಸ್ಎಸ್ಎಂ ಮಂಗಳೂರು ವಿಭಾಗದ ಮುಖ್ಯಸ್ಥೆ ಡಾ.ಸುಧಾ ಎನ್ ವೈದ್ಯ, ಕಾರ್ಯದರ್ಶಿ ವೆಂಕಟೇಶ್ ನಾಯಕ್, ಕೋಶಾಧಿಕಾರಿ ಆಶಾಲತಾ, ಸಂಚಾಲಕಿ ಡಾ. ಶೋಭಾ, ಸಹ-ಸಂಯೋಜಕಿ ಡಾ. ಜ್ಯೋತಿ ಪ್ರಿಯಾ, ಸಂಘಟನಾ ಕಾರ್ಯದರ್ಶಿ ಡಾ. ಸುಭಾಷಿಣಿ ಶ್ರೀವತ್ಸ ಮೊದಲಾದವರು ಉಪಸ್ಥಿತರಿದ್ದರು. ಕೇರಳದ ಕೇಂದ್ರೀಯ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಕಾವ್ಯಹೆಗ್ಡೆ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಜಿ. ಲಕ್ಷ್ಮಣ್ ಹಾಗೂ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಅವರನ್ನು ಸನ್ಮಾನಿಸಲಾಯಿತು.
ಸಂವಾದ, ಪ್ರಶ್ನೋತ್ತರ
ಈ ಸಂದರ್ಭ ರಾಷ್ಟ್ರೀಯ ಶಿಕ್ಷಣನೀತಿ ಕುರಿತು ನಡೆದ ಸಂವಾದದಲ್ಲಿ ಯುಜಿಸಿಯ ಸಹಕಾರ್ಯದರ್ಶಿ ಡಾ. ಎನ್ ಗೋಪುಕುಮಾರ್, ಚಾಣಕ್ಯ ವಿಶ್ವವಿದ್ಯಾನಿಲಯದ ಕಲೆ, ಮಾನವಿಕ ಮತ್ತು ಸಮಾಜವಿಜ್ಞಾನ ವಿದ್ಯಾಲಯದ ಸಹಾಯಕಪ್ರಾಧ್ಯಾಪಕ ಡಾ. ರಾಜೇಂದ್ರ ಜೋಷಿ ವಿಚಾರಮಂಡಿಸಿದರು. ಕರ್ನಾಟಕ ರಾಜ್ಯಉನ್ನತ ಶಿಕ್ಷಣಪರಿಷತ್‌ನ ಕಾರ್ಯಕಾರಿ ನಿರ್ದೇಶಕ ಡಾ. ಗೋಪಾಲಕೃಷ್ಣ ಜೋಷಿ ಚರ್ಚೆಯ ನೇತೃತ್ವವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ವಿಜ್ಞಾನನಿಖಾಯದ ಡೀನ್ ಪ್ರೊ.ಮಂಜುನಾಥ್ ಪಟ್ಟಾಭಿ ಸಂವಾದದಲ್ಲಿ ಪಾಲ್ಗೊಂಡರು. ಮಧ್ಯಾಹ್ನ ಪ್ರಶ್ನೋತ್ತರ ಕಾರ್ಯಕ್ರಮ ಗಮನ ಸೆಳೆಯಿತು.ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಡಾ. ಲತಾ ಎ. ಪಂಡಿತ್ ವಹಿಸಿದ್ದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ