ಮಂಗಳೂರು ವಿವಿ ಸಮಾಜ ಕಾರ್ಯ ವಿಭಾಗದಿಂದ ಗ್ರಾಮೀಣ ಅಧ್ಯಯನ ಶಿಬಿರದಿಂದ ಗ್ರಾಮಸ್ಥರಿಗೆ ಕ್ರೀಡಾಕೂಟ

Upayuktha
0

ದೊಡ್ಡಬೈರನಕುಪ್ಪೆ: ಮಂಗಳೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಸಮಾಜ ಕಾರ್ಯ ಸಂಶೋಧನಾ ಮತ್ತು ಅಧ್ಯಯನ ವಿಭಾಗದ ಆಶ್ರಯದಲ್ಲಿ ಆಯ್ದಿಸಲಾದ ಆಯೋಜಿಸಲಾದ ಸಮಾಜಕಾರ್ಯ ಗ್ರಾಮೀಣ ಅಧ್ಯಯನ ಶಿಬಿರದ  ಮೂರನೇ ದಿನದ ಅಂಗವಾಗಿ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಮಚೂರು ಗ್ರಾಮದಲ್ಲಿ ಗ್ರಾಮಸ್ಥರಿಗೆ ಕ್ರೀಡಾಕೂಟವನ್ನು ಏರ್ಪಡಿಸಲಾಗಿತ್ತು.

ವಿದ್ಯಾರ್ಥಿಗಳು ವಿವಿಧ ರೀತಿಯ ಆಟೋಟ ಸ್ಪರ್ಧೆಗಳನ್ನು ಪುರುಷರಿಗೆ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಏರ್ಪಡಿಸಿದ್ದರು. ಗ್ರಾಮಸ್ಥರು ವಿದ್ಯಾರ್ಥಿಗಳಿಗೆ ಸಹಕರಿಸುತ್ತಾ ಸ್ಪರ್ಧೆಯಲ್ಲಿ ಪಾಲ್ಗೊಂಡರು, ವಿಜೇತರಿಗೆ ಬಹುಮಾನಗಳನ್ನು ನೀಡಲಾಗಿತ್ತು. ಗ್ರಾಮಸ್ಥರ ಆಸಕ್ತಿ ಹಾಗೂ ಸಹಕಾರದದಿಂದ ಪಾಲ್ಗೊಂಡು ಕ್ರೀಡಾಕೂಟ ಯಶಸ್ವಿಯಾಗಿ ಕೊನೆಗೊಂಡಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಮಾಜಕಾರ್ಯ ವಿಭಾಗದ ಉಪನ್ಯಾಸಕರಾದ ಶ್ರೀಮತಿ ವಿನುತ ಮತ್ತು ದೀಪಕ್ ಬಿ ಉಪಸ್ಥಿತರಿದ್ದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


Post a Comment

0 Comments
Post a Comment (0)
To Top