‘ಸಮುದ್ರಯಾನ ವಿಜ್ಞಾನದಲ್ಲಿ ಉದ್ಯೋಗಾವಕಾಶಗಳುʼ - ವಿಶೇಷ ಉಪನ್ಯಾಸ
ಮಂಗಳೂರು: ಶಿಸ್ತು, ಸಮರ್ಪಣಾಭಾವ, ಕ್ರಮಬದ್ಧರೀತಿ, ವಿಮರ್ಶೆ, ತಾರ್ಕಿಕಚಿಂತನೆ ನಮ್ಮ ಯಶಸ್ಸಿನಲ್ಲಿ ಮಹತ್ವದ ಪಾತ್ರವಹಿಸುತ್ತವೆ, ಎಂದು ಬೆಂಗಳೂರಿನ ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರದ ಸಂಶೋಧಕಿ ಪೂಜಾ ಮುರಳೀಧರನ್ ಅಭಿಪ್ರಾಯಪಟ್ಟಿದ್ದಾರೆ.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರಸಾಯನಶಾಸ್ತ್ರ ವಿಭಾಗಗಳು (ಪದವಿ ಮತ್ತು ಸ್ನಾತಕೋತ್ತರ), ಐಕ್ಯೂಎಸಿಯ ಸಹಯೋಗದೊಂದಿಗೆ ರವೀಂದ್ರ ಕಲಾಭವನದಲ್ಲಿ ಸೋಮವಾರ ಆಯೋಜಿಸಿದ್ದ ‘ಸಮುದ್ರಯಾನ ವಿಜ್ಞಾನದಲ್ಲಿ ಉದ್ಯೋಗಾವಕಾಶಗಳುʼ ಎಂಬ ವಿಶೇಷ ಉಪನ್ಯಾಸದಲ್ಲಿ, ವಿವಿ ಕಾಲೇಜಿನ 2004 ನೇ ಬ್ಯಾಚ್‌ನ ಬಿ.ಎಸ್ಸಿ ವಿದ್ಯಾರ್ಥಿನಿಯೂ ಆಗಿರುವ ಅವರು, ಪ್ರಯತ್ನಿಸಿದರಷ್ಟೇ ನಮ್ಮ ಸಾಮರ್ಥ್ಯದ ಅರಿವು ನಮಗಾಗುತ್ತದೆ, ಯಶಸ್ಸು ಕೈಗೆಟುಕುತ್ತದೆ. ಸೋಲೇ ಗೆಲುವಿನ ಸೋಪಾನ, ಎಂದು ಅವರು ಕಿವಿಮಾತು ಹೇಳಿದರು.
ಪ್ರಾಂಶುಪಾಲೆ ಡಾ. ಅನಸೂಯ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸ್ನಾತಕೋತ್ತರ ರಸಾಯನಶಾಸ್ತ್ರ ವಿಭಾಗದ ಸಂಯೋಜಕ ಡಾ. ಲಕ್ಷ್ಮಣ ಕೆ. ಸ್ವಾಗತಿಸಿದರು. ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಕೆ ಎಂ ಉಷಾ, ಐಕ್ಯೂಎಸಿ ಸಂಯೋಜಕ ಡಾ. ಸಿದ್ಧರಾಜು ಎಂ ಎನ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಿ.ಎಸ್ಸಿ ವಿದ್ಯಾರ್ಥಿನಿ ಸಿಂಚನಾ ಕಾರ್ಯಕ್ರಮ ನಿರೂಪಿಸಿದರು. ಎಂ.ಎಸ್ಸಿ ವಿದ್ಯಾರ್ಥಿನಿ ಭೂಮಿಕಾ ಧನ್ಯವಾದ ಸಮರ್ಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ