ಮಂಗಳೂರು: ಶಿಶು ಅಭಿವೃದ್ಧಿ ಯೋಜನೆಯ ಮಂಗಳೂರು ಗ್ರಾಮಾಂತರ ವ್ಯಾಪ್ತಿಗೊಳಪಟ್ಟ 5ರಿಂದ 16 ವರ್ಷದವರೆಗಿನ ಮಕ್ಕಳಿಗೆ ಉಳ್ಳಾಲ ತಾಲೂಕಿನ ಕುತ್ತಾರು ಪದವಿನ ದುರ್ಗಾ ವಾಹಿನಿ ಮಹಿಳಾ ಮಂಡಲದ ಆವರಣದಲ್ಲಿ ಮೇ.20ರಿಂದ 27ರವರೆಗೆ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಶಿಬಿರದಲ್ಲಿ ಚಿತ್ರಕಲೆ, ಕರಕುಶಲ, ಜೇಡಿ ಮಣ್ಣಿನ ಕಲೆ, ಸಮೂಹ ನೃತ್ಯ, ಸಮೂಹ ಗೀತೆ, ಯೋಗ ಮತ್ತು ಇತರ ಚಟುವಟಿಕೆಗಳ ತರಬೇತಿ ನೀಡಲಾಗುತ್ತದೆ.
ಆಸಕ್ತ ಮಕ್ಕಳ ಪೋಷಕರು ನಿಗದಿತ ನಮೂನೆಯಲ್ಲಿ ಅರ್ಜಿ ಹಾಗೂ ಜನ್ಮದಿನದ ದಾಖಲೆಯೊಂದಿಗೆ ಮೇ.20ರಂದು ಕುತ್ತಾರು ಪದವಿನ ದುರ್ಗಾವಾಹಿನಿ ಮಹಿಳಾ ಮಂಡಲದಲ್ಲಿ ನೇರವಾಗಿ ಸಲ್ಲಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ