‘ಮೂಲ ಸಮಾಲೋಚನಾ ಕೌಶಲ’ ಕುರಿತ ರಾಷ್ಟ್ರ ಮಟ್ಟದ ಸಮ್ಮೇಳನ ‘ಮನಸ್ವಿ 2023’

Upayuktha
0

‘ಕನಸು ನನಸು ಮಾಡುವ ಮನಸ್ಸು’- ಡಾ.ಎಂ. ಮೋಹನ ಆಳ್ವ


ವಿದ್ಯಾಗಿರಿ:
‘ಮನಸ್ಸು ಆರೋಗ್ಯವಾಗಿದ್ದರೆ ಮಾತ್ರ ನಮ್ಮೆಲ್ಲ ಕನಸುಗಳನ್ನು ನನಸು ಮಾಡಲು ಸಾಧ್ಯ’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು. 


ಆಳ್ವಾಸ್ ಕಾಲೇಜು ಆವರಣದಲ್ಲಿ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಮ್ಮಿಕೊಂಡ ‘ಮೂಲ ಸಮಾಲೋಚನಾ ಕೌಶಲ’ ಕುರಿತ ಎರಡು ದಿನಗಳ ರಾಷ್ಟ್ರ ಮಟ್ಟದ ಸಮ್ಮೇಳನ ‘ಮನಸ್ವಿ 2023’ ಅನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. 


ದೇಹವು ಸಪ್ತಧಾತುಗಳಿಂದ ಕೂಡಿದೆ. ಆದರೆ, ಅವುಗಳ ಎಲ್ಲದರ ನಿಯಂತ್ರಣ ಮನಸ್ಸಿನಲ್ಲಿದೆ. ಅದನ್ನು ಸಮಾಜದ ಹಿತಕ್ಕಾಗಿ ಬಳಸಬೇಕು ಎಂದರು.  


ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ (ಎಸ್‍ಕೆಡಿಆರ್‍ಡಿಪಿ) ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಮಾತನಾಡಿ, ಗ್ರಾಮೀಣ ಭಾಗದಲ್ಲಿರುವ ಮಾನಸಿಕ ಅಸ್ವಸ್ಥರಿಗೆ ಉತ್ತಮ ಚಿಕಿತ್ಸೆ ನೀಡಲು ಆಳ್ವಾಸ್ ಆಯುರ್ವೇದ ಆಸ್ಪತ್ರೆ ಜೊತೆ ಸೇರಿ ಕೆಲಸ ಮಾಡಲಾಗುವುದು ಎಂದರು. 


ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಆಪ್ತ ಸಮಾಲೋಚಕಿ ದಿಶಾರಾಗ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲ ಡಾ. ಸಜಿತ್ ಎಂ ಇದ್ದರು.


ಸಮ್ಮೇಳನದ ಮುಖ್ಯ ಸಂಘಟನಾ ಕಾರ್ಯದರ್ಶಿ ಡಾ. ಸ್ಮಿತಾ ಸ್ವಾಗತಿಸಿದರು. ಅತಿಥಿಗಳ ಪರಿಚಯವನ್ನು  ಡಾ. ರವಿಪ್ರಸಾದ್ ಹೆಗ್ಡೆ ಮತ್ತು  ಡಾ. ನಿಖಿಲ್ ಕುಮಾರಿ, ಡಾ. ಗೀತಾ ಮಾರ್ಕೆಂಡೆ ಕಾರ್ಯಕ್ರಮಸಂಯೋಜಿಸಿದರು, ಡಾ ವಿನಿತಾ ಡಿಸೋಜಾ ವಂದಿಸಿದರು.


ಸಮಾರೋಪ:

ಉಡುಪಿಯ ಎಸ್‍ಡಿಎಂ ಆಯುರ್ವೇದ ಕಾಲೇಜು, ಬೆಳ್ತಂಗಡಿಯ ಪ್ರಸನ್ನ ಆಯುರ್ವೇದ ಕಾಲೇಜು, ಆಳ್ವಾಸ್ ಸಂಯೋಜಿತ ವಿಜ್ಞಾನ ವಿಭಾಗ, ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯ, ಆಳ್ವಾಸ್ ಪ್ರಕೃತಿ ಚಿಕಿತ್ಸೆ ಹಾಗೂ ಯೋಗವಿಜ್ಞಾನ ಕಾಲೇಜು, ಶಿವಮೊಗ್ಗದ ರೋಟರಿ ಕಾಲೇಜು, ಆಳ್ವಾಸ್ ಆಯುರ್ವೇದ ಸ್ನಾತಕೋತ್ತರ ವಿಭಾಗ ಸೇರಿದಂತೆ ವಿವಿಧ ಸಂಸ್ಥೆಗಳನ್ನು ಪ್ರತಿನಿಧಿಸಿದ ಒಟ್ಟು 98 ಮಂದಿಗೆ ಮಂಗಳವಾರ ನಡೆದ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರ ನೀಡಲಾಯಿತು. 


ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿನಯ್ ಆಳ್ವ ಪ್ರಮಾಣ ಪತ್ರ ನೀಡಿದರು. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top