ಉಡುಪಿ: ಅದ್ವಿತ್ ಐ ಟೆಕ್ ಪ್ರೈ.ಲಿ, ಆಭರಣ ಮೋಟಾರ್ಸ್, ಸುಷ್ಮಾ ಆಟೋ ಮೊಬೈಲ್ಸ್, ಕಾಂಚನ್ ಅಥರ್ ಎಲೆಕ್ಟ್ರಿಕಲ್ ಹಾಗೂ ಬಿ.ಎಸ್.ಎಲ್ ಇಂಡಿಯಾ ಪ್ರೈ.ಲಿ ಕಂಪನಿಗಳ ವತಿಯಿಂದ ಮೇ 19 ರಂದು ಬೆಳಗ್ಗೆ 10.30 ಕ್ಕೆಬಿ.ಎಸ್.ಎಲ್ಇಂಡಿಯಾ ಪ್ರೈ.ಲಿ, ಸಂಪರ್ಕ ಜೆರಾಕ್ಸ್ ಹತ್ತಿರ, 2ನೇ ಮಹಡಿ, ನಂದಕಮರ್ಷಿಯಲ್ ಕಾಂಪ್ಲೆಕ್ಸ್, ಕೋರ್ಟ್ರೋಡ್, ಉಡುಪಿ ಇಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ,ಪಿ.ಯು.ಸಿ,ಐ.ಟಿ.ಐ,ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ, ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ಕಾರ್ಡ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ,ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ