ಮಂಗಳೂರು: ಬಿಜೆಪಿ ಸರಕಾರ ಟ್ರಿಪಲ್ ತಲಾಖ್ ನಿಷೇಧಿಸುವ ಮೂಲಕ ಮುಸ್ಲಿಂ ಮಹಿಳೆಯರ ರಕ್ಷಣೆಗೆ ಮುಂದಾಗಿದೆ. ಆದರೆ ಕಾಂಗ್ರೆಸ್ ಇದನ್ನು ವಿರೋಧಿಸಿತ್ತು. ಕಾಂಗ್ರೆಸ್ ಸರಕಾರ ಶಾದಿಭಾಗ್ಯದಂತಹ ಯೋಜನೆ ಜಾರಿಗೆ ತಂದು ಮುಸ್ಲಿಂ ತುಷ್ಟಿಕರಣಕ್ಕೆ ಮುಂದಾಗಿತ್ತು. ಲವ್ ಜೆಹಾದ್, ಹಿಜಾಬ್ ಇತ್ಯಾದಿಗಳಿಗೆ ಬೆಂಬಲಿಸುವ ಮೂಲಕ ಹಿಂದೂ ವಿರೋಧಿಯಾಗಿ ಗುರುತಿಸಿಕೊಂಡಿತ್ತು ಎಂದು ಬಿಜೆಪಿ ರಾಜ್ಯ ಪ್ರಶಿಕ್ಷಣ ವರ್ಗದ ಸದಸ್ಯೆ, ಜಿಲ್ಲಾ ಮಹಿಳಾ ಮೋರ್ಚಾ ಸಂಚಾಲಕಿ ಡಾ. ಮಂಜುಳಾ ರಾವ್ ಹೇಳಿದರು.
ಪಕ್ಷದ ಮಾಧ್ಯಮ ಕೇಂದ್ರದಲ್ಲಿ ಇಂದು (ಮೇ 5) ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬಿಜೆಪಿ ಈ ಚುನಾವಣೆಯಲ್ಲಿ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಹೊಸ ಮುಖಗಳಿಗೆ ಆದ್ಯತೆ ನೀಡಿದೆ. ದಕ್ಷಿಣ ಕನ್ನಡದಲ್ಲಿ ಇಬ್ಬರು ಮಹಿಳೆಯರಿಗೆ ಅವಕಾಶ ನೀಡಿದೆ. ಬೇರೆ ಯಾವ ಪಕ್ಷಗಳೂ ನೀಡದಿರುವಷ್ಟು ಮಹಿಳಾ ಪ್ರಾತಿನಿಧ್ಯ ಮತ್ತು ಮಹಿಳೆಯರಿಗೆ ಅವಕಾಶಗಳನ್ನು ಬಿಜೆಪಿ ನೀಡಿದ್ದು, ಎಲ್ಲ ಮಹಿಳೆಯರು ಇದರ ಸದುಪಯೋಗ ಪಡೆದು ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಮಂಜುಳಾ ರಾವ್ ಕರೆ ನೀಡಿದರು. ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಮಾಡಿದ ಬಿಜೆಪಿ ಸರಕಾರ ಭಾಗೀರಥಿ ಮುರುಳ್ಯ ಮತ್ತು ಆಶಾ ತಿಮ್ಮಪ್ಪ ಅವರಿಗೆ ಸ್ಪರ್ಧೆಗೆ ಅವಕಾಶ ನೀಡಿದೆ ಎಂದರು.
ಡಬಲ್ ಎಂಜಿನ್ ಸರ್ಕಾರಿಂದ ಮಹಿಳೆಯರ ಸಬಲೀಕರಣಕ್ಕೆ ಹಲವು ಯೋಜನೆಗಳು: ಧನಲಕ್ಷ್ಮೀ ಗಟ್ಟಿ
ಇನ್ನಷ್ಟು ಜನ ಮಹಿಳೆಯರು ಬೂತ್ ಮಟ್ಟದಲ್ಲಿ ಕೆಲಸ ಮಾಡಬೇಕಿದೆ. ಮಹಿಳೆ ಮನಸ್ಸು ಮಾಡಿದರೆ ದೇಶವನ್ನು, ಸಮಾಜವನ್ನು ಕಟ್ಟಲು ಸಮರ್ಥಳು. ಮಹಿಳಾ ಅಭ್ಯರ್ಥಿಗಳ ಪರವಾಗಿ ಎಲ್ಲ ಮಹಿಳೆಯರೂ ತಮ್ಮ ಮನೆಗಳಿಂದ ಹೊರಬಂದು ಬಿಜೆಪಿ ಸರಕಾರವನ್ನು ತರಲು ಶ್ರಮಿಸಬೇಕು ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಪ್ರಶಿಕ್ಷಣ ವರ್ಗದ ಸದಸ್ಯೆ ಹಾಗೂ ಜಿಲ್ಲಾ ಮಹಿಳಾ ಮೋರ್ಚಾ ಸಂಚಾಲಕರಾದ ಡಾ. ಮಂಜುಳಾ ರಾವ್, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಹಾಗೂ ಜಿಲ್ಲಾ ಸಂಚಾಲಕಿ ಪೂಜಾ ಪೈ, ಉಪಮೇಯರ್ ಹಾಗೂ ಮಹಿಳಾ ಮೋರ್ಚಾ ಉಪಾಧ್ಯಕ್ಷೆ, ಪೂರ್ಣಿಮಾ ಎಂ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸೇವಂತಿ ಮತ್ತು ರಾಜ್ಯ ಮಾಧ್ಯಮ ಸಮಿತಿ ಸದಸ್ಯರಾದ ರತನ್ ರಮೇಶ್ ಪೂಜಾರಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ