ಮೈಸೂರು: ಕರ್ನಾಟಕ ಸಾಂಸ್ಕೃತಿಕ ಹಾಗೂ ಸಾಹಿತ್ಯ ಪರಿಷತ್ತು ಸಂಸ್ಥೆಯ ಉದ್ಘಾಟನಾ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಮೈಸೂರು ಪುರಭವನದಲ್ಲಿ ಮೇ 28ರಂದು ನಡೆಯಲಿದೆ. ವಿಪ್ರ ಮುಖಂಡರು ಹಾಗೂ ಸಮಾಜ ಸೇವಕರಾದ ಡಾ. ರಘುರಾಮ್ ವಾಜಪೇಯಿ ಈ ಕಾರ್ಯಕ್ರಮ ಉದ್ಘಾಟಿಸುವರು. ಚಲನಚಿತ್ರ ನಿರ್ಮಾಪಕರು ಲಯನ್ ಡಾ. ಎಸ್ ವೆಂಕಟೇಶ್ ಎಂಜೆಎಫ್ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ವೈದ್ಯೆ, ಸಾಹಿತಿ, ಸಂಘಟಕರು ಆದ ಡಾ. ವಾಣಿಶ್ರೀ ಕಾಸರಗೋಡು ಇವರು ವಿಶೇಷ ಅತಿಥಿಯಾಗಿ ಪಾಲ್ಗೊಳ್ಳುವರು ಹಾಗೂ ಅನೇಕ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಸಮಾರಂಭದಲ್ಲಿ ಸಾಹಿತ್ಯ, ಸಾಂಸ್ಕೃತಿಕ, ಸಂಘಟನೆಯ ಮುಖಾಂತರ ಹಲವಾರು ಕಲಾವಿದರಿಗೆ ವೇದಿಕೆ ಅವಕಾಶ ಒದಗಿಸಿಕೊಟ್ಟು ಕಲಾವಿದರನ್ನು ಮುಕ್ತ ಮನಸ್ಸಿನಿಂದ ಪ್ರೋತ್ಸಾಹಿಸುತ್ತಿರುವ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ ಕಾಸರಗೋಡು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷೆ ಡಾ. ವಾಣಿಶ್ರೀ ಕಾಸರಗೋಡು ಅವರನ್ನು ಅವರ ಕಲಾ ಸೇವೆಯನ್ನು ಗುರುತಿಸಿ "ಶ್ರೇಷ್ಠ ಕಲಾ ಸೇವಾರತ್ನ" ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಹಾಗೂ ಇನ್ನೂ ಹಲವಾರು ಕಲಾ ಸಾಧಕರನ್ನು ಗುರುತಿಸಿ ಗೌರವಿಸಿ ಪುರಸ್ಕರಿಸಲಾಗುವುದು ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಲಯನ್ ಕಸ್ತೂರಿ ಚಂದ್ರು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ